ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ ನಾಮಪತ್ರ ಸಲ್ಲಿಕೆಯ ನಾಲ್ಕನೇ ದಿನವಾದ ಇಂದು ಜಿಲ್ಲೆಯಲ್ಲಿ 9 ಜನ ಅಭ್ಯರ್ಥಿಗಳಿಂದ 15 ನಾಮಪತ್ರಗಳು ಸಲ್ಲಿಕೆಯಾಗಿದೆ.
ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ.ಗೋಪಾಲ ಪೂಜಾರಿ, ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ದಿನೇಶ್ , ಕಾಪು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ವಿನಯ್ ಕುಮಾರ್ ಸೊರಕೆ , ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಉದಯ ಶೆಟ್ಟಿ, ಜಾತ್ಯಾತೀತ ಜನತಾದಳದ ಅಭ್ಯರ್ಥಿಯಾಗಿ ಶ್ರೀಕಾಂತ್ ಪೂಜಾರಿ , ಪಕ್ಷೇತರ ಅಭ್ಯರ್ಥಿಗಳಾಗಿ ಪ್ರಮೋದ್ ಮುತಾಲಿಕ್ , ಡಾ.ಮಮತಾ ಹೆಗ್ಡೆ, ಕೆ.ಹರೀಶ್ ಅಧಿಕಾರಿ, ಸುಧಾಕರ ಆಚಾರ್ಯ ನಾಮಪತ್ರಗಳನ್ನು ಸಲ್ಲಿಸಿದ್ದು, ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಇಂದು ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ.