ಉಡುಪಿ: ಪರ್ಯಾಯ ಸಹಿತ ಧಾರ್ಮಿಕ ಕಾರ್ಯಕ್ರಮಗಳ ಅವಧಿ ಮಿರಿದ ಬ್ಯಾನರ್ ತೆರವುಗೊಳಿಸಲು ಸೂಚನೆ

ಉಡುಪಿ, ಜ.30: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪರ್ಯಾಯ ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅಳವಡಿಸಲಾಗಿರುವ ಹಾಗೂ ನಗರಸಭಾ ಕಚೇರಿಯಿಂದ ಅನುಮತಿ ಪಡೆದು ಅವಧಿ ಮೀರಿರುವ ಬ್ಯಾನರ್, ಬಂಟಿಂಗ್ಸ್ ಹಾಗೂ ಕಟೌಟ್‌ಗಳನ್ನು ಫೆ.1ರೊಳಗೆ ತೆರವುಗೊಳಿಸುವಂತೆ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

ತಪ್ಪಿದ್ದಲ್ಲಿ ಫೆ.2ರಂದು ನಗರಸಭೆ ವತಿಯಿಂದ ತೆರವುಗೊಳಿಸಲಾಗುವುದು ಹಾಗೂ ತೆರವುಗೊಳಿಸಿದ ಬ್ಯಾನರ್ ಮತ್ತು ಕಟೌಟ್‌ಗಳನ್ನು ವಾಪಾಸು ನೀಡ ಲಾಗುವುದಿಲ್ಲ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Latest Indian news

Popular Stories