Udupi

ಉಡುಪಿ : ವ್ಯಕ್ತಿ ನಾಪತ್ತೆ

ಉಡುಪಿ: ಇತ್ವಾರಿ ಮರಕಮ್ (30) ಎಂಬ ವ್ಯಕ್ತಿಯು ಸೆಪ್ಟಂಬರ್ 9 ರಂದು ಕೂಲಿ ಕೆಲಸದ ನಿಮಿತ್ತಾ ಬೆಂಗಳೂರಿನಿಂದ ಉಡುಪಿಗೆ ಬರುವ ರೈಲು ಹತ್ತಿದ್ದು, ಸೆಪ್ಟಂಬರ್ 10 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಮಣ್ಯ ರೈಲ್ವೆ ನಿಲ್ದಾಣದಲ್ಲಿ ಇಳಿದು ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷಕರ ಪ್ರಕಟಣೆ ತಿಳಿಸಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button