ಉಡುಪಿ: ಮೊದಲ ದಿನವೇ 65,212 ಮಕ್ಕಳಿಗೆ ಪೊಲೀಯೋ ಡ್ರಪ್ಸ್ | ಉಡುಪಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ

ಉಡುಪಿ: ಮಕ್ಕಳು ಹುಟ್ಟಿನಿಂದ ಅಂಗವೈಕಲ್ಯದಂತಹ ಸಮಸ್ಯೆಗಳಿಗೆ ಒಳಗಾಗಬಾರದು ಎಂಬ ಉದ್ದೇಶದಿಂದ ಪಲ್ಸ್ ಪೋಲಿಯೋ ಲಸಿಕೆಯನ್ನು ನೀಡುತ್ತಿದ್ದು, ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಲಸಿಕೆಯನ್ನು ನೀಡುವುದರೊಂದಿಗೆ ಸಮಾಜವನ್ನು ಪೋಲಿಯೋ ಮುಕ್ತವಾಗಿಸಲು ಸಹಕರಿಸಬೇಕು ಎಂದು ಶಾಸಕ ಯಶ್ ಪಾಲ್ ಎ ಸುವರ್ಣ ಹೇಳಿದರು.

ಅವರು ಇಂದು ನಗರದ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲಾ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕರ‍್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಜಿಲ್ಲೆಯು ಆರೋಗ್ಯ ಶೈಕ್ಷಣಿಕ ಹಾಗೂ ಧಾರ್ಮಿಕ ವಾಗಿ ಬಹಳಷ್ಟು ಸಾಧನೆ ಮಾಡಿದ್ದು, ವೈದ್ಯರ ಸಲಹೆಗಳನ್ನು ಪಾಲನೆ ಮಾಡುವ ಮೂಲಕ ಜಿಲ್ಲೆಯಲ್ಲಿ ಆರೋಗ್ಯ ಪೂರ್ಣ ವಾತಾವರಣವನ್ನು ನಿರ್ಮಾಣಗೊಳಿಸಬೇಕು ಎಂದರು.
ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಮಮತಾ ಜಿ. ಎಸ್, ನಿಗಧಿತ ಸಮಯದಲ್ಲಿ ಮಕ್ಕಳಿಗೆ ಬೇಕಾದ ಲಸಿಕೆಯನ್ನು ಒದಗಿಸುವುದು ಪೋಷಕರ ಜವಾಬ್ದಾರಿಯಾಗಿದ್ದು, ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ, ಮಕ್ಕಳು ಮುಂದಿನ ದಿನಗಳಲ್ಲಿ ಎದುರಿಸುವ ಅನೇಕ ಸಮಸ್ಯೆಗಳನ್ನು ನಿವಾರಿಸಬಹುದಾಗಿದೆ ಎಂದರು.

ದೇಶವು ಪೋಲಿಯೋ ಮುಕ್ತ ರಾಷ್ಟ್ರ ಎಂಬ ಹೆಸರನ್ನು ಗಳಿಸಿದ್ದು, ಅದನ್ನು ಮುಂದುವರಿಸಿಕೊಂಡು ಹೋಗುವಂತೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ ವಾಗಿದೆ ಎಂದರು.

ಕಾರ್ಯಕ್ರಮ ದಲ್ಲಿ ಮಾತನಾಡಿದ ರೋಟರಿ ಸಂಸ್ಥೆಯ ಅಧ್ಯಕ್ಷೆ ದೀಪಾ ಮಕ್ಕಳು ಅರೋಗ್ಯವಂತರಾಗಿ ಇದ್ದಾಗ ದೇಶದ ಪ್ರಗತಿ ಸಾಧ್ಯವಾಗುತ್ತದೆ ಹಾಗಾಗಿ ಮಕ್ಕಳು ಪೋಲಿಯೋಗೆ ಒಳಗಾಗದಂತೆ ಮುಂಜಾಗ್ರತೆಯಾಗಿ ಲಸಿಕೆಯನ್ನು ಪಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಪೌರಯುಕ್ತ ರಾಯಪ್ಪ, ಡಿ.ಜೆ.ಡಿ ಕಛೇರಿಯ ಉಪನಿರ್ದೇಶಕಿ ಡಾ. ಮಲ್ಲಿಕಾ, ಜಿಲ್ಲಾ ಆಸ್ಪತ್ರೆ ನಿವಾಸಿ ವೈದ್ಯಾಧಿಕಾರಿ ಡಾ. ವಾಸುದೇವ್ , ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಜ್ಯೋತ್ಸ್ನಾ ಬಿ.ಕೆ, ಎಂ.ಸಿ.ಎಚ್ ಆಸ್ಪತ್ರೆ ಅಧೀಕ್ಷಕ ಡಾ.ರಾಜಗೋಪಾಲ ಭಂಡಾರಿ, ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ರೋಟರಿ ಸಂಸ್ಥೆಯ ಪದಾಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು, ಎಂ.ಸಿ.ಎಚ್ ಆಸ್ಪತ್ರೆಯ ವೈದ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್ ಸ್ವಾಗತಿಸಿದರೆ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ್ ರಾವ್ ನಿರೂಪಿಸಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶೀಧರ್ ವಂದಿಸಿದರು.
ಈ ಸಂರ‍್ಭದಲ್ಲಿ ಶಾಸಕ ಯಶ್ ಪಾಲ್ ಸುರ‍್ಣ ಮಕ್ಕಳಿಗೆ ಲಸಿಕೆಯನ್ನು ಹಾಕಿದರು.

ಉಡುಪಿ:ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮದ ಮೊದಲ ದಿನವಾದ ಇಂದು ಉಡುಪಿ ಜಿಲ್ಲೆಯ 0-5ವರ್ಷ ದೊಳಗಿನ ಶೇ.97.55ರಷ್ಟು ಮಕ್ಕಳಿಗೆ ಪೋಲಿಯೊ ಲಸಿಕೆಯನ್ನು ನೀಡಲಾಗಿದೆ.

ಜಿಲ್ಲೆಯಲ್ಲಿ 5ವರ್ಷದೊಳಗಿನ ಒಟ್ಟು 66,852 ಮಕ್ಕಳನ್ನು ಗುರುತಿಸಲಾ ಗಿದ್ದು, ಇವರಲ್ಲಿ ಮೊದಲ ದಿನ 65,212 ಮಕ್ಕಳಿಗೆ ಪೋಲಿಯೊ ಲಸಿಕೆಯನ್ನು ನೀಡಲಾಗಿದೆ.

ಉಡುಪಿ ತಾಲೂಕಿನ 33,652 ಮಕ್ಕಳಲ್ಲಿ 31,948 ಮಕ್ಕಳಿಗೆ (ಶೇ.94.94), ಕುಂದಾಪುರ ತಾಲೂಕಿನ 21,755 ಮಕ್ಕಳಲ್ಲಿ 21,868 ಮಕ್ಕಳಿಗೆ (ಶೇ.100.52), ಕಾರ್ಕಳ ತಾಲೂಕಿನ 11,445 ಮಕ್ಕಳಲ್ಲಿ 11,396 ಮಕ್ಕಳಿಗೆ (ಶೇ.99.57) ಪೋಲಿಯೊ ಹನಿಯನ್ನು ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ

Latest Indian news

Popular Stories