ಉಡುಪಿ: ಪ್ಯಾರಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ ಎನ್ನಲಾದ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣದಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನಾ ಜಾಥ ಹಮ್ಮಿಕೊಂಡಿತ್ತು.

ಉಡುಪಿಯ ಬಿಜೆಪಿ ಕಚೇರಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಈ ಪ್ರತಿಭಟನಾ ರ಼್ಯಾಲಿಯಲ್ಲಿ ಕಾಂಗ್ರೆಸ್ ಸರಕಾರವನ್ನು “ಹಿಂದು ವಿರೋಧಿ” ಸರಕಾರವೆಂದು ಘೋಷಣೆ ಕೂಗಲಾಯಿತು.

ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಯಾವುದೇ ಹಿಡನ್ ಕ್ಯಾಮೆರಾ ಇರಲಿಲ್ಲ,ವೀಡಿಯೋ ಸಾಕ್ಷ್ಯಧಾರ ಯಾವುದೂ ಇದು ವರೆಗೆ ದೊರಕಿಲ್ಲವೆಂದು ಪೊಲೀಸ್ ಇಲಾಖೆ, ಮಹಿಳಾ ಆಯೋಗ ಸದಸ್ಯೆ ಖುಷ್ಬೂ ಸುಂದರ್ ತಿಳಿಸಿದ್ದಾರೆ. ಇದೀಗ ಬಿಜೆಪಿ ಈ ವಿಚಾರವನ್ನು ಇಟ್ಟುಕೊಂಡು ಕಾಂಗ್ರೆಸ್ ವಿರುದ್ಧ ಆರೋಪಗಳ ಸುರಿಮಳೆ ಮಾಡುತ್ತಿದೆ.
ಪ್ರತಿಭಟನೆಯಲ್ಲಿ ಶಾಸಕರಾದ ಯಶ್ಫಾಲ್ ಸುವರ್ಣ,ಗುಡ್ಮಿ ಸುರೇಶ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.