
ರಾಹುಲ್ ಗಾಂಧಿಯ ಸಂಸತ್ ಸದಸ್ಯತ್ವವನ್ನು ಅನರ್ಹಗೊಳಿಸಿದ ಕೇಂದ್ರ ಬಿಜೆಪಿ ಸರಕಾರದ ಕ್ರಮವನ್ನು ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ
ಉಡುಪಿ, ಮಾ.25: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ಅನರ್ಹಗೊಳಿಸಿದ ಕೇಂದ್ರ ಬಿಜೆಪಿ ಸರಕಾರದ ಕ್ರಮವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಉಡುಪಿ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.


ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಮಾತನಾಡಿ, ರಾಹುಲ್ ಗಾಂಧಿ ನಮ್ಮ ಹೆಮ್ಮೆ. ಅವರ ಹೆಸರಲ್ಲಿ ಮತ ಕೇಳಲು ನಮಗೆ ಯಾವುದೇ ಅಂಜಿಕೆ ಇಲ್ಲ. ಆದರೆ ಸೆಕ್ಸ್ ಹಗರಣ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿರುವ ಬಿಜೆಪಿ ನಾಯಕರ ಹೆಸರಿನಲ್ಲಿ ಮತ ಕೇಳಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಟೀಕಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್ ಮಾತನಾಡಿ ಕೇಂದ್ರ ಬಿಜೆಪಿ ಸರಕಾರದ ಕ್ರಮ ವನ್ನು ತೀವ್ರವಾಗಿ ಖಂಡಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ರಮೇಶ್ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ, ಅಮೃತ್ ಶೆಣೈ, ವರೋನಿಕಾ ಕರ್ನೆಲಿಯೋ, ಮುರಳಿ ಶೆಟ್ಟಿ, ಭುಜಂಗ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು,. ಕುಶಾಲ್ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಸಾಯಿರಾಜ್, ನಾಗೇಶ್ ಕುಮಾರ್ ಉದ್ಯಾವರ, ಇಸ್ಮಾಯಿಲ್ ಆತ್ರಾಡಿ, ಯತೀಶ್ ಕರ್ಕೇರ, ಪ್ರಸಾದ್ರಾಜ್ ಕಾಂಚನ್, ಸುರೇಶ್ ಶೆಟ್ಟಿ ಬನ್ನಂಜೆ, ಸೌರಬ್ ಬಲ್ಲಾಳ್, ಕೀರ್ತಿ ಶೆಟ್ಟಿ, ಶಶಿಧರ ಶೆಟ್ಟಿ ಎಲ್ಲೂರು, ಹಬೀಬ್ ಅಲಿ, ಮಹಾಬಲ ಕುಂದರ್, ಗಣೇಶ್ ನೆರ್ಗಿ ಮೊದಲಾದವರು ಹಾಜರಿದ್ದರು




