ಉಡುಪಿ: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ವಿರೋಧಿಸಿ ಪ್ರತಿಭಟನೆ

ಉಡುಪಿ, ಮೇ 8: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ವಿರೋಧಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಮಹಿಳೆಯರು ಬುಧವಾರ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಪೊರಕೆ ಹಿಡಿದು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಹಿಳಾ ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷೆ ಗೀತಾ ವಾಗ್ಳೆ ಉಡುಪಿಯ ಕಾಲೇಜಿನ ಶೌಚಾಲಯದಲ್ಲಿನ ವಿಡಿಯೋ ಚಿತ್ರೀಕರಣ ಪ್ರಕರಣದ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾದವರು ರಸ್ತೆಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿದರು. ಆದರೆ ಇವತ್ತು ಈ ನೂರಾರು ಮಂದಿ ಸಂತ್ರಸ್ತ ಮಹಿಳೆಯರ ಬಗ್ಗೆ ಮಹಿಳಾ ಮೋರ್ಚಾದವರಿಗೆವ ಯಾವುದೇ ಕಾಳಜಿ ಸಹನೂಭೂತಿ ಇಲ್ಲವಾಗಿದೆ. ಈ ಬಗ್ಗೆ ಚಾಕರ ಎತ್ತದೆ ವೌನ ವಹಿಸಲಿದ್ದಾರೆ ಎಂದು ಅವರು ಟೀಕಿಸಿದರು.

ಕೆಪಿಸಿಸಿ ವಕ್ತಾರೆ ವರೋನಿಕಾ ಕರ್ನೆಲಿಯೋ ಮಾತನಾಡಿ, ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಿಂದ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಪುರುಷರು ಮಹಿಳೆಯರ ಬಗ್ಗೆ ಸಂಶಯದಿಂದ ನೋಡುವಂತಾಗಿದೆ. ಈತನ ಕರ್ಮಕಾಂಡ ಯಾರನ್ನು ಬಿಟ್ಟಿಲ್ಲ. ವೃದ್ಧೆಯರನ್ನು ಬಿಡದೆ ಅತ್ಯಾಚಾರ ಎಸಗಿರುವ ಈತ ದೊಡ್ಡ ಕ್ರಿಮಿನಲ್. ಇದಕ್ಕೆ ನ್ಯಾಯ ಸಿಗಲೇ ಬೇಕು. ಸರಕಾರ ಈ ಬಗ್ಗೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಉಡುಪಿ ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಕಾಂಗ್ರೆಸ್ ಮುಖಂಡರಾದ ಉದ್ಯಾವರ ನಾಗೇಶ್ ಕುಮಾರ್, ಹರೀಶ್ ಕಿಣಿ, ಮಲ್ಲಿಕಾ ಪೂಜಾರಿ, ಗೋಪಿ ನಾಯ್ಕಾ, ಡಾ.ಸುನೀತಾ ಶೆಟ್ಟಿ, ಶಶಿಧರ್ ಶೆಟ್ಟಿ ಎರ್ಮಾಳು, ಗಣೇಶ್ ನೆರ್ಗಿ, ಪ್ರಭಾ ಶೆಟ್ಟಿ, ರೋಶನಿ ಒಲಿವೇರಾ, ಮೀನಾಕ್ಷಿ ಮಾಧವ ಬನ್ನಂಜೆ, ಐಡಾ ಗಿಬ್ಬಾ, ಚಂದ್ರಿಕಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು

Latest Indian news

Popular Stories