Featured StoryState NewsUdupi

ಉಡುಪಿಯಲ್ಲಿ ಉತ್ತಮ ಮಳೆ (Rain) – ಒಂದು ವಾರ ಮಳೆಯ ಸಾಧ್ಯತೆ

ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಉಡುಪಿ ಜಿಲ್ಲೆಉ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಬುಧವಾರ ಇಡೀ ದಿನ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಾಗಿತ್ತು. ಇದೀಗ ಗುರುವಾಗ ಬೆಳಿಗ್ಗೆ ಜೋರಾದ ಮಳೆ ಸುರಿಯುತ್ತಿದೆ.

ರಾಜ್ಯದಲ್ಲಿ ಒಂದು ವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜನವರಿ 4 ರಿಂದ 10 ರವರೆಗೆ ದಕ್ಷಿಣ ಒಳನಾಡು ಮತ್ತು ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದರೆ, ಜನವರಿ 8 ರಿಂದ 10 ರವರೆಗೆ ಉತ್ತರ ಒಳನಾಡಿನ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಕನ್ನಡದ ಹಲವು ಕಡೆ ಬುಧವಾರ ಬೆಳಿಗ್ಗೆ ಗುಡುಗು ಮಿಂಚು ಸಹಿತ ಮಳೆಯಾಗಿತ್ತು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button