ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, “ರಾಮಮಂದಿರ ನಿರ್ಮಾಣಕ್ಕೆ ನಾನು ದೇಣಿಗೆ ಕೊಟ್ಟಿದ್ದೇನೆ. ರಾಮ- ಕೃಷ್ಣ, ಪರಮೇಶ್ವರನ ಮೇಲೆ ನನಗೆ ವೈಯಕ್ತಿಕವಾಗಿ ಬಹಳ ಭಕ್ತಿ ಇದೆ” ಎಂದರು
ನಾನು ನಮ್ಮ ಸಂಸ್ಕೃತಿ, ಭಕ್ತಿಯನ್ನು ಆಚರಿಸುತ್ತೇನೆ. ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ನಾನು ಮಾತನಾಡಲ್ಲ. ನಾನು ಪಕ್ಷದ ಅಧ್ಯಕ್ಷೆ ಅಲ್ಲ ಅಥವಾ ದೊಡ್ಡ ಸ್ಥಾನದಲ್ಲೂ ಇಲ್ಲ ಎಂದರು.
ನಾನು ಧೈವೀಭಕ್ತಳು ಎಂದು ಪದೇ ಪದೇ ಹೇಳುತ್ತೇನೆ. ರಾಮ ಮಂದಿರಕ್ಕೆ ಒಂದಲ್ಲ ಒಂದು ದಿನ ಹೋಗಿ ಹೋಗುತ್ತೇನೆ. ರಾಮ ಮಂದಿರ ಅವರದ್ದೂ ಅಲ್ಲ ನಮ್ಮದೂ ಅಲ್ಲ. ಅಯೋಧ್ಯಾ ರಾಮ ಮಂದಿರ 140 ಕೋಟಿ ಮಂದಿ ಜನರದ್ದು ಎಂದರು.
ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಮಾತಿಗೆ ಪ್ರತಿಕ್ರಿಯಿಸಿದ ಹೆಬ್ಬಾಳ್ಕರ್, ಯತೀಂದ್ರ ಸಿದ್ದರಾಮಯ್ಯ ಯಾವ ಕಾರಣಕ್ಕೆ ಹೀಗೆ ಹೇಳಿದ್ದಾರೆ ಗೊತ್ತಿಲ್ಲ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಸೀಟುಗಳಿಸುವುದು ನಮ್ಮ ಗುರಿಯಾಗಿದೆ. ಯತೀಂದ್ರ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಕೇಂದ್ರ ಟಾರ್ಗೆಟ್ ಕೊಡುವ ಅವಶ್ಯಕತೆ ಇಲ್ಲ ಇದು ನಮ್ಮ ಜವಾಬ್ದಾರಿಯಾಗಿದೆ. 130 ಜನ ಗೆದ್ದ ಮೇಲೆ ಐದು ಗ್ಯಾರಂಟಿ ಅನುಷ್ಠಾನವಾಗಿದೆ. ನಮ್ಮ ನಮ್ಮ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.ಮತದಾರರು ಅತ್ಯಂತ ಹೆಚ್ಚು ಸೀಟುಗಳನ್ನು ಗೆಲ್ಲಿಸಿ ಕೊಡುತ್ತಾರೆ ಎಂಬ ನಂಬಿಕೆ ಇದೆ ಎಂದರು.
ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಉತ್ತರ ಹೈಕಮಾಂಡ್ ಕೊಡುತ್ತದೆ. ಈ ಬಗ್ಗೆ ನಾನು ಪ್ರತಿಕ್ರಿಯಿಸಿ ಇನ್ನು ಗೊಂದಲ ಕೇಳಿ ಮಾಡಿಕೊಳ್ಳುವುದಿಲ್ಲ. ಬರ ಮಳೆ ಜಿಎಸ್‌ಟಿ ವಿಚಾರದಲ್ಲಿ ರಾಜ್ಯದ ಜನತೆಯ ಸಹಾಯಕ್ಕೆ ಯಾವ ಸಂಸದರು ಬರುತ್ತಿಲ್ಲ ಎಂದರು.
ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಟ್ಯಾಬ್ಲೋ ಕೂಡ ಇಲ್ಲ.ರಾಜ್ಯದ ಜನ ಮುಂದೆ ಏನು ಮಾಡಬೇಕು ಎಂದು ಈಗಾಗಲೇ ನಿರ್ಧಾರ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಕುರಿತು ಮಾತನಾಡಿದ ಅವರು, ರೋಡ್ ಶೋಗಳು ರಾಜಕೀಯದಲ್ಲಿ ಸಹಜ ಅವರು ಮಾಡ್ತಾರೆ ನಾವು ಮಾಡುತ್ತೇವೆ ಎಂದು ಹೇಳಿದರು.
ಪರ್ಯಾಯ:
ಕೃಷ್ಣಮಠದ ಪರ್ಯಾಯದಲ್ಲಿ ಮೊದಲ ಬಾರಿಗೆ ಭಾಗಿಯಾಗುತ್ತಿದ್ದೇನೆ. ಕೃಷ್ಣ ಮಠದ ಸಂಸ್ಕೃತಿ ಪದ್ಧತಿಯಲ್ಲಿ ಕುಟುಂಬ ಸಮೇತ ಭಾಗಿಯಾಗಲು ಬಂದಿದ್ದೇನೆ. ಸಿಎಂ ಸಿದ್ದರಾಮಯ್ಯಗೆ ಆಹ್ವಾನ ಮಾಡಲಾಗಿದೆ. ಬೇರೆ ಕಾರ್ಯಕ್ರಮ ಇರುವುದರಿಂದ ಸಿದ್ದರಾಮಯ್ಯನವರು ಕಾರ್ಯಕ್ರಮಕ್ಕೆ ಬರುತ್ತಿಲ್ಲ ಎಂದರು.
ಗೃಹ ಸಚಿವ ಪರಮೇಶ್ವರ್ ಅವರು ಉಡುಪಿ ಜಿಲ್ಲೆಯ ಪ್ರವಾಸ ಮಾಡುತ್ತಿದ್ದಾರೆ. ನಗರ ಸುಂದರಿಕರಣಕ್ಕೆ ಸರಕಾರ ಸಹಕಾರ ನೀಡಿದೆ.ಪರ್ಯಾಯ ಕಾರ್ಯಕ್ರಮದ ಸಾಂಸ್ಕೃತಿಕ ತಂಡಗಳು ಟ್ಯಾಬ್ಲೋಗಳನ್ನು ವ್ಯವಸ್ಥೆ ಮಾಡಿದ್ದೇವೆ ಎಂದರು.
ಮಠದವರು ಕೇಳಿದ ಎಲ್ಲಾ ಬೇಡಿಕೆಗಳಿಗೆ ನಾವು ಸ್ಪಂದಿಸುತ್ತಿದ್ದೇವೆ. ನಗರೋತ್ಥಾನದಲ್ಲಿ 30 ಕೋಟಿ ರೂಪಾಯಿಯನ್ನು ನಗರ ಸೌಂದರ್ಯಕ್ಕೆ ಬಿಡುಗಡೆ ಮಾಡಿದ್ದೇವೆ. ಹೆಚ್ಚಿನ 10 ಕೋಟಿ ರೂಪಾಯಿಗೆ ಬೇಡಿಕೆ ಇಡಲಾಗಿದೆ ಅದು ಶೀಘ್ರ ತಲುಪಲಿದೆ ಎಂದರು.
ಅನಂತ್ ಕುಮಾರ್ ಚುನಾವಣೆ ಬಂದಾಗಷ್ಟೇ ಮುಖ ತೋರಿಸುತ್ತಾರೆ. ಅವರು ಹಿಂದಿನಿಂದಲೂ ಮಾಡಿಕೊಂಡು ಬರುತ್ತಿರುವುದು ಹೀಗೆಯೇ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೀಗೆ ಮಾತನಾಡಿದ್ದನ್ನು ಯಾರು ಸಹಿಸಲು ಕ್ಷಮಿಸಲು ಸಾಧ್ಯವಿಲ್ಲ. ರಾಜಕೀಯವಾಗಿ ಇದು ಉಪಯೋಗವಾಗುತ್ತದೆ ಎಂದು ಅವರು ಭಾವಿಸಿದ್ದರೆ ಅದು ಬಾಲಿಶ ಎಂದು ಹೇಳಿದರು.