ಉಡುಪಿ: ನೇಣು ಬಿಗಿದು ಆತ್ಮಹತ್ಯೆ

ಉಡುಪಿ, ಜು.18; ಮನನೊಂದ ವ್ಯಕ್ತಿಯೊಬ್ಬರು ಮನೆಯ ಬಾವಿಯ ರಾಟೆ ಅಳವಡಿಸುವ ಪೈಪಿಗೆ, ಲುಂಗಿಯಿಂದ ನೇಣುಬೀಗಿದುಕೊಂಡು, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ರಾತ್ರಿ ಗುಂಡಿಬೈಲಿನಲ್ಲಿ ನಡೆದಿದೆ. ಆತ್ಮಹತ್ಯೆಗೈದಿರುವ ವ್ಯಕ್ತಿಯನ್ನು ಮಾದವ ಪೂಜಾರಿ (58ವ) ಎಂದು ಗುರುತಿಸಲಾಗಿದೆ. ಮರದ ಮಿಲ್ಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರೆಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ಸ್ವಷ್ಟ ಕಾರಣ ತಿಳಿದುಬಂದಿಲ್ಲ. ನಗರ ಪೋಲಿಸ್ ಠಾಣೆಯ ಪೋಲಿಸರು ಘಟನಾ ಸ್ಥಳದಲ್ಲಿಗೆ ಬಂದು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಶವವನ್ನು ಜಿಲ್ಲಾಸ್ಪತ್ರೆಯ ಶವ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ಸಹಕರಿಸಿದರು.

Latest Indian news

Popular Stories