ಶಿರ್ವಾ: ಯುವಕನೊರ್ವ ಕಾಣಿಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ.
ಬೆಳಪು ಗ್ರಾಮದ ಗೆವಿನ್ ಜೈಸನ್ ಮಥಾಯಸ್ (24) ರವರು ಬೈಕಂಪಾಡಿಗೆ ಹೋಗುತ್ತೇನೆ ಎಂದು ಹೇಳಿ ಹೋಗಿದ್ದು ಮೊಬೈಲ್ ಸ್ವಿಚ್ ಆಫ್ ಆಗಿರುತ್ತದೆ. ಕಾಣೆಯಾದ ಗೆವಿನ್ ಜೈಸನ್ ಮಥಾಯಸ್ ರವರನ್ನು ಸಂಬಂಧಿಕರ ಮನೆಯಲ್ಲಿ ಆಸು ಪಾಸು ಎಲ್ಲಾ ಕಡೆಗಳಲ್ಲಿ ಹುಡುಕಾಡಿದ್ದು ಪತ್ತೆಯಾಗಿರುವುದಿಲ್ಲ.
ಈ ಬಗ್ಗೆ ಶಿರ್ವಾ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 54/2024 ಕಲಂ: ಗಂಡಸು ಕಾಣೆಯಂತೆ ಪ್ರಕರಣ ದಾಖಲಾಗಿರುತ್ತದೆ.