ಉಡುಪಿ: ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಇಂದಿನ ಪ್ರಮುಖ ಸುದ್ದಿಗಳು

ನೀತಿ ಸಂಹಿತೆ ಉಲ್ಲಂಘನೆ : ನಗದು ವಶ

ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ. 29 ರಂದು ಹೆಜಮಾಡಿ ಚೆಕ್‌ಪೋಸ್ಟ್‌ನಲ್ಲಿ 97,000 ರೂ. ದಾಖಲೆ ರಹಿತ ನಗದನ್ನು ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಲೋಕಸಭಾ ಚುನಾವಣೆ: ಇಬ್ಬರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂದಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಇಂದು ಪಕ್ಷೇತರ ಅಭ್ಯರ್ಥಿಯಾಗಿ ಸುಧೀರ್ ಕಾಂಚನ್ ಹಾಗೂ ಜನಹಿತ ಪಕ್ಷದ ಅಭ್ಯರ್ಥಿಯಾಗಿ ಸುಪ್ರೀತ್ ಕುಮಾರ್ ಪೂಜಾರಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಲು ಏಪ್ರಿಲ್ 4 ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 5 ರಂದು ನಾಮತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 8 ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದೆ.

ಚುನಾವಣಾ ಅಕ್ರಮ ದೂರು: ಸಿ-ವಿಜಿಲ್‌ನಲ್ಲಿ ಸಲ್ಲಿಸಿ ಶೀಘ್ರದಲ್ಲಿಯೇ ಪರಿಹಾರ

ಉಡುಪಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ತಮ್ಮ ನಾಯಕರುಗಳನ್ನು ಆಯ್ಕೆ ಮಾಡಲು ಮತದಾನದ ಮೂಲಕ ಅವಕಾಶ ಮಾಡಿ ಕೊಟ್ಟಿದೆ. ಮತದಾನ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ, ನ್ಯಾಯಸಮ್ಮತ, ಮುಕ್ತ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಯಲು ಸಾರ್ವಜನಿಕರ ಪಾತ್ರ ಬಹುಮುಖ್ಯವಾಗಿದೆ.

ಚುನಾವಣಾ ಅಕ್ರಮಗಳನ್ನು ತಡೆಯಲು ಮಾದರಿ ನೀತಿ ಸಂಹಿತೆ ತಂಡ, ಸೆಕ್ಟರ್ ಅಧಿಕಾರಿಗಳ ತಂಡ, ಪೊಲೀಸ್ ತಂಡ, ಫ್ಲೈಯಿಂಗ್ ್ಕ್ವಾಡ್ ತಂಡ, ವೀಡಿಯೋ ವೀಕ್ಷಣಾ ತಂಡ ಸೇರಿದಂತೆ ಅನೇಕ ತಂಡಗಳನ್ನು ರಚಿಸಿದೆ. ಇದರ ಜೊತೆಗೆ ಚುನಾವಣಾ ಆಯೋಗವು ಸಿ-ವಿಜಿಲ್ (C-Vigil)
ಆಪ್ ಅನ್ನು ರೂಪಿಸಿದೆ. ಚುನಾವಣೆಗೆ ಸಂಬಂಧಿಸಿದಂತೆ ಯಾವುದಾದರೂ ದೂರುಗಳು ಇದ್ದಲ್ಲಿ ಸಿ-ವಿಜಿಲ್ ಮೂಲಕ ದೂರು ನೀಡಿದ್ದಲ್ಲಿ ತಕ್ಷಣವೇ ಚುನಾವಣಾ ಅಧಿಕಾರಿಗಳು ದೂರಿನ ವಿರುದ್ಧ ಕ್ರಮ ಜರುಗಿಸಲಿದ್ದಾರೆ. ಯಾವುದೇ ಅಭ್ಯರ್ಥಿ ಅಥವಾ ಪಕ್ಷದವರು ಅಥವಾ ಅವರ ಪರವಾಗಿ ಮತದಾರರನ್ನು ಸೆಳೆಯಲು ಹಣ, ಮದ್ಯ, ಉಡುಗೊರೆಗಳನ್ನು ಹಂಚುವುದು ಸೇರಿದಂತೆ ಮತ್ತಿತರ ಚುನಾವಣೆಗೆ ಸಂಬಂಧಿಸಿದ ದೂರುಗಳನ್ನು ಚುನಾವಣಾ ಅಧಿಕಾರಿಗಳಿಗೆ ಅಥವಾ ಪೊಲೀಸರಿಗೆ ದೂರು ನೀಡುವುದು ಯಾರಿಗೆ ಅಥವಾ ಹೇೆ?, ುನಾವಾ ನೀತಿ ಸಂಹಿೆ ಉಲ್ಲಂನೆಗಳನ್ನು ಹೇೆ ನಿರ್ಬಂಧಿಸುವುದು ಎಂಬ ಹಲವು ಪ್ರಶ್ನೆಳಿಗೆ ಸಿ-ವಿಜಿಲ್ ಆ್ (ಸಿಟಿಜನ್-ವಿಜಿಲಿಯನ್ಸ್ ಆಪ್) ಮೂಲಕ ಬೆರಳ ತುದಿಯ ಬಳಕೆಯೊಂದಿಗೆ ಸ್ಮಾರ್ಟ್ೆೆನ್ಗಳ ಮೂಲಕ ದೂರು ನೀಡಬಹುದು

ದಾಗಿದೆ. ಸಿ-ವಿಜಿಲ್ ಆಪ್ ಡೌನ್ಲೋಡ್: ಮೊದಲು ಗೂಗಲ್ ್ಲೇಸ್ಟೋರ್ ಅಥವಾ ಆಪಲ್ ಆಪ್ ಸ್ಟೋರ್ನಿಂದ ಸಿ-ವಿಜಿಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ. ಯಾವುದೇ ಚುನಾವಣಾ ಸಂಬಂಧಿತ ಉಲ್ಲಂಘನೆಗಳ ಫೋಟೋಗಳು ಅವಾ ವೀಡಿಂೊಳನ್ನು ಸೆೆಹಿಡಿಯಿರಿ. ನಿಮ್ಮ ವದಿಂುನ್ನು ಅಪ್ಲಿೇಶನ್ ಮೂಲ ಅಪ್ಲೋಡ್ ಮಾಡಿ, ಘಟನೆ ಮತ್ತು ಸ್ಥಳದ ವಿವರಗಳನ್ನು ಒದಗಿಸಿ. ನಿಮ್ಮ ವರದಿಯನ್ನು ಕ್ರಮಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ತ್ವರಿತವಾಗಿ ರವಾನಿಸಲಾಗುತ್ತದೆ.

ಸಿ-ವಿಜಿಲ್ ಆಪ್ ಕಾರ್ಯ ಹೇಗೆ?
ಆಪ್ ಓಪನ್ ಮಾಡಿದಾಗ ನಿಮ್ಮ ಹೆಸರು ಹಾಗೂ ಮೊಬೈಲ್ ಸಂಖ್ಯೆಯನ್ನು ಹಾಕಿ ರಿಜಿಸ್ಟರ್ ಮಾಡಿಕೊಳ್ಳಬೇಕು. ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಹಣ, ಮದ್ಯ, ಉಡುಗೊರೆಗಳನ್ನು ಹಂಚುವ ಸಂದರ್ಭದಲ್ಲಿ ಸಾರ್ವಜನಿಕರು ಫೋಟೋ ಮ್ತು ವಿಡಿಂೋವನ್ನು (2 ನಿಮಿಷ) ಸೆರೆಹಿಡಿದು ಈ ಆಪ್‌ನಲ್ಲಿ ಅಪ್ಲೋಡ್ ಮಾಡಬಹುದು. ಅಲ್ಲಿನ ವಿಳಾಸವನ್ನು ನಮೂದಿಸಬೇಕು. ಜೊತೆಗೆ ಇದು ಸಂಪೂರ್ಣ ಉಚಿತವಾಗಿರಲಿದೆ.

ಏನೆಲ್ಲಾ ದೂರು ನೀಡಬಹುದು?
ವ್ಯಕ್ತಿಯೊಬ್ಬರು ನಿರ್ದಿಷ್ಟ ವ್ಯಕ್ತಿ ಅಥವಾ ಪಕ್ಷಕ್ಕೆ ಹಣ ವಿತರಣೆ ಮಾಡಿದರೆ, ಉಡುಗೊರೆ, ಮದ್ಯ ಹಂಚಿಕೆ, ಅನುಮತಿ ಪಡೆಯದೇ ಬ್ಯಾನರ್ ಅಥವಾ ಪೋಸ್ಟರ್, ಬೆರಿೆ ಹಾುವುು, ಬಂೂು ಪ್ರರ್ಶನ, ಾರ್ಮಿ ಅವಾ ೋಮು ುರಿು ಪ್ರೋಾರಿ ಾಷಣ, ಮ್ಟೆಂು 200 ಮೀಟ್ ಪ್ರೇಶಲ್ಲಿ ನಿಷೇಧದ ಅವಧಿಂುಲ್ಲೂ ಪ್ರಾ, ಮಾನ ದಿನಂು ಮಾನ್ನು ಸಾಗಿಸುವುು. ಹೀಗೆ ಯಾವುದೇ ರೀತಿ ಅಕ್ರಮ ಚಟುವಟಿಕೆಗಳು ಕಂಡು ಬಂದಲ್ಲಿ ಈ ಆಪ್ನಲ್ಲಿ
ದೂರು ಕೊಡಬಹುದು. 100 ನಿಮಿಷಗಳ ಒಳಗೆ ಕ್ರಮ :
ಆಪ್ನಲ್ಲಿ ದಾಖಲಿಸುವ ದೂರುಗಳ ಬಗ್ಗೆ ಜಿಲ್ಲಾ ಮಟ್ಟದ ಸಿ-ವಿಜಿಲ್ ನೋಡೆಲ್ ಅಧಿಕಾರಿಗಳು ದೂರಿಗೆ ಸಂಬಂಧಿಸಿದಂತೆ ಆ ಕ್ಷೇತ್ರ ವ್ಯಾಪ್ತಿಯ ಎಫ್.ಎಸ್.ಟಿ ತಂಡದವರಿಗೆ ಕ್ರಮ ಕೈಗೊಳ್ಳಲು ಕಳುಹಿಸಿಕೊಡುತ್ತಾರೆ. ಅವರು ಸಾರ್ವಜನಿಕರ ದೂರುಗಳಿಗೆ 100 ನಿಮಿಷಗಳ ಒಳಗಾಗಿ ಕ್ರಮ ಕೈಗೊಳ್ಳುತ್ತಾರೆ. ಇದರಿಂದ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರ ಆಮಿಷಗಳು ಸಾಕ್ಷಿ ಸಮೇತ ದಾಖಲಾಗಲಿವೆ..

ದೂರಿನೊಂದಿಗೆ ಸೆರೆಹಿಡಿಯಲಾದ ಜಿಪಿಎಸ್ ಮಾಹಿತಿಯು ಅದನ್ನು ಸಂಬಂಧಪಟ್ಟ ಜಿಲ್ಲಾ ನಿಯಂತ್ರಣ ಕೊಠಡಿಗೆ ಸ್ವಯಂಚಾಲಿತವಾಗಿ ಫ್ಲಾಗ್ ಮಾಡುತ್ತದೆ. ಫ್ಲೈಯಿಂಗ್ ಸ್ಕ್ವಾಡ್ ತಂಡಗಳನ್ನು ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ರವಾನಿಸಲು ಅನುವು ಮಾಡಿಕೊಡುತ್ತದೆ.

ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಈಗಾಗಲೇ ಕಂಟ್ರೋಲ್ ರೂಂ ಮತ್ತು ಸಿ-ವಿಜಿಲ್ ತಂಡ ಕಾರ್ಯಗತವಾಗಿದೆ. ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯ (ಮಾ.30) ವರೆಗೆ ಒಟ್ಟು 245 ದೂರುಗಳು ಸಿ-ವಿಜಿಲ್ ಮುಖಾಂತರ ದಾಖಲಾಗಿದ್ದು, ಎಲ್ಲಾ 245 ಪ್ರಕರಣಗಳನ್ನು ವಿಲೇ ಮಾಡಲಾಗಿದೆ.

ದೂರು ನೀಡುವಾಗ ದೂರುದಾರರ ಹೆಸರು, ವಿಳಾಸವನ್ನು ಗೌಪ್ಯವಾಗಿ ಇಡಲಾಗುತ್ತದೆ. ಚುನಾವಣೆ ಮುಗಿಯುವವರೆಗೂ ಮೂರು ಪಾಳಿಗಳಲ್ಲಿ 24 ಗಂಟೆಗೂ ಚುನಾಣಾ ಸಿಬ್ಬಂದಿ ಕಾರ್ಯ ನಿರ್ವಹಿಸುವರು ಎಂದು ಜಿಲ್ಲಾ ಸಿ-ವಿಜಿಲ್ ನೋಡೆಲ್ ಅಧಿಕಾರಿಯಾದ ಕುಮಾರ್ ಬಿ.ಆರ್ ಅವರು ತಿಳಿಸಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಯುತವಾಗಿ ನಡೆಸಲು ಯಾವುದೇ ಚುನಾವಣೆ ಅಕ್ರಮ, ಆಮಿಷ ತಡೆಯಲು ಸಿವಿಜಿಲ್ ಬಳಸುವ ಮೂಲಕ ಎಲ್ಲರೂ ಒಟ್ಟಾಗಿ ಕಾರ್ಯನಿರ್ವಹಿಸಿ, ್ರಜಾಪ್ರಭುತ್ವವನ್ನು ದೃಢಗೊಳಿಸೋಣ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ತಿಳಿಸಿದ್ದಾರೆ.

ಪ್ರತಿಯೊಬ್ಬ ಅಭ್ಯರ್ಥಿಗಳ ಖರ್ಚು ವೆಚ್ಚಗಳ ಬಗ್ಗೆ ನಿಗಾ: ವೆಚ್ಚ ವೀಕ್ಷಕ ಅಲೋಕ್ ಕುಮಾರ್

ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರತಿಯೊಬ್ಬ ಅಭ್ಯರ್ಥಿಗಳ ಚುನಾವಣಾ ಪ್ರಚಾರಕ್ಕೆ ಸಂಬಂದಿಸಿದ ಪ್ರತಿಯೊಂದು ವೆಚ್ಚದ ಬಗ್ಗೆ ಪ್ರತಿ ದಿನ ನಿಗಾ ವಹಿಸಿ ವರದಿ ಸಲ್ಲಿಸುವಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ವೆಚ್ಚ ವೀಕ್ಷಕರಾದ ಅಲೋಕ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಸಹಾಯಕ ವೆಚ್ಚ ವೀಕ್ಷಕರ ತಂದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ಎಫ್.ಎಸ್.ಟಿ, ಎಸ್.ಎಸ್.ಟಿ, ವಿ.ವಿ.ಟಿ ಹಾಗೂ ಇನ್ನಿತರೆ ತಂಡಗಳು ಜವಾಬ್ದಾರಿಯುತವಾಗಿ ತಮಗೆ ವಹಿಸಿರುವ ಕೆಲಸ ನಡೆಸಿ, ಅಭ್ಯರ್ಥಿಗಳು ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಪಾಲಿಸುತ್ತಿರುವ ಬಗ್ಗೆ ನಿಗಾ ವಹಿಸುವುದರ ಜೊತೆಗೆ ಚುನಾವಣಾ ವೆಚ್ಚದ ವರದಿಯನ್ನು ನೀಡಬೇಕು. ಚುನಾವಣಾ ಆಯೋಗ ನೀಡಿರುವ ಮಾರ್ಗದರ್ಶನಗಳನ್ನು ತಪ್ಪದೇ ಪಾಲಿಸಬೇಕು ಎಂದರು.

ಹಣದ ಬಲದ ಮೇಲೆ ಚುನಾವಣೆ ನಡೆಯಬಾರದು. ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಯಬೇಕು. ಚೆಕ್ಪೋಸ್ಟ್ಗಲ್ಲಿ ತಪಾಸಣೆಯನ್ನು ತೀವ್ರಗೊಳಿಸಿ, ಅನುಮಾನ ಬರುವ ವಾಹನಗಳನ್ನು ತಪಾಸಣೆ ನಡೆಸಬೇಕು. ದಾಖಲೆ ರಹಿತ ಹಣ ಅಥವಾ ಇನ್ನಿತರೆ ವಸ್ತುಗಳು ಸಾಗಾಣಿಕೆಂಾಗದಂತೆ ನೋಡಬೇಕು. ತಪಾಸಣೆ ವೇಳೆ ದಾಖಲೆ ರಹಿತ ಹಣ ಸಿಕ್ಕಲ್ಲಿ ಕೂಡಲೇ ಐ.ಟಿ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದರು.
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಚುನಾವಣಾ ವೆಚ್ಚ ನಿರ್ವಹಿಸಲು ನೇಮಕವಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಮಾತನಾಡಿ, ಜಿಲ್ಲೆಯಲ್ಲಿ ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ವಿವಿಧ ತಂಡಗಳು, ಅಧಿಕಾರಿಗಳು, ್ಥಾಪನೆಯಾಗಿರುವ ಚೆಕ್‌ಪೋಸ್ಟ್‌ಗಳಲ್ಲಿನ ಅಧಿಕಾರಿಗಳು ಹಾಗೂ ಇನ್ನಿತರೆ ಚುನಾವಣಾ ಅಧಿಕಾರಿಗಳು ತಮಗೆ ನೀಡಿರುವ ಕಾರ್ಯಗಳನ್ನು ಚಾಚೂ ತಪ್ಪದೇ ಮಾಡಬೇಕು. ಹಣ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳುವಾಗ ವೀಡಿಯೋ ಚಿತ್ರೀಕರಣವನ್ನು ತಪ್ಪದೇ ಮಾಡಬೇಕು ಎಂದರು.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ದೂರುಗಳು ಬಂದಾಗ ಕೂಡಲೇ ಫ್ಲೈಯಿಂಗ್ ಸ್ಕ್ವಾಡ್ಸ್ ತಂಡಗಳು ಕಾರ್ಯಪ್ರವೃತ್ತರಾಗಿ ಅಕ್ರಮಗಳು ನಡೆಯದಂತೆ ನೋಡಿಕೊಳ್ಳಬೇಕು. ಒಂದೊಮ್ಮೆ ಉಲ್ಲಂಘನೆಯಾದಲ್ಲಿ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್.ಕೆ, ಅಪರ ಜಿ್ಲಾಧಿಕಾರಿ ಮಮತಾದೇವಿ ಜಿ.ಎಸ್, ಜಿ.ಪಂ.ನ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್, ಚುನಾವಣೆಗೆ ಸಂಬಂಧಿಸಿದ ಎಫ್.ಎಸ್.ಟಿ, ಎಸ್.ಎಸ್.ಟಿ, ವಿ.ವಿ.ಟಿ ತಂಡದವರು ಸೇರಿದಂತೆ ಇನ್ನಿತರ ಜಿಲ್ಲಾ ಮಟ್ಟದ ನೋಡೆಲ್ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು

Latest Indian news

Popular Stories