Udupi

ಉಡುಪಿ: ಝಕಾತ್ ಹಣದಿಂದ ಎರಡು ಅಟೋ ರಿಕ್ಷಾಗಳ ವಿತರಣೆ

ಉಡುಪಿ, ಫೆ.21: ಉಡುಪಿ ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ ಈ ವರ್ಷ ಸಂಗ್ರಹಿಸಿದ ಝಕಾತ್ನ 5 ಲಕ್ಷ ರೂ. ಮೊತ್ತದಲ್ಲಿ ಅರ್ಹ ಫಲಾನುಭವಿಗಳಿಗೆ ಎರಡು ಅಟೋ ರಿಕ್ಷಾಗಳನ್ನು ಇಂದು ವಿತರಿಸಲಾಯಿತು.

ಉಡುಪಿ ಜಾಮಿಯ ಮಸೀದಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಉದ್ಯಮಿ ಬಿ.ಕೆ.ಇಕ್ಬಾಲ್ ಮತ್ತು ಜಾಮಿಯ ಮಸೀದಿ ಅಧ್ಯಕ್ಷ ರಿಯಾಝ್ ಅಹಮದ್ ರಿಕ್ಷಾಗಳ ಕೀಲಿ ಕೈಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಅಧ್ಯಕ್ಷತೆಯನ್ನು ಉಡುಪಿ ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಮುನೀರ್ ಮುಹಮ್ಮದ್ ವಹಿಸಿದ್ದರು. ಮಸೀದಿಯ ಖತೀಬ್ ವೌಲಾನ ರಶೀದ್ ಅಹ್ಮದ್ ನದ್ವಿ ಝಕಾತ್ನ ಪ್ರಾಮುಖ್ಯತೆಯನ್ನು ವಿವರಿಸಿದರು. ಮಸೀದಿಯ ಕಾರ್ಯದರ್ಶಿ ಖಲೀದ್ ಅಬ್ದುಲ್ ಅಝೀಝ್ ಉಪಸ್ಥಿತರಿದ್ದರು. ವೆಲ್ಫೇರ್ ಸಂಸ್ಥೆಯ ಕಾರ್ಯದರ್ಶಿ ವಿ.ಎಸ್.ಉಮರ್ ಸ್ವಾಗತಿಸಿದರು. ಇಕ್ಬಾಲ್ ಮನ್ನಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button