Udupi

ಉಡುಪಿ | ವಿಕ್ರಂ ಗೌಡ ಎನ್’ಕೌಂಟರ್ ಪ್ರಕರಣ; ಸೂಕ್ತ ತನಿಖೆ ನಡೆಸುವಂತೆ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ

ಉಡುಪಿ: ವಿಕ್ರಂ ಗೌಡ ಎನ್’ಕೌಂಟರ್ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸುವಂತೆ ಕೋರಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಿದರು.

ನವೆಂಬರ್ 18 ರಂದು ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಕಬ್ಬಿನಾಲೆ ಪೀತಂಬೈಲು ಎಂಬಲ್ಲಿ ನಕ್ಸಲ್ ಕಮಾಂಡರ್ ಎಂದು ಗುರುತಿಸಿಕೊಂಡಿರುವ ವಿಕ್ರಂ ಗೌಡ ಅಲಿಯಾಸ್ ವಿಕ್ರಂ ಗೌಡ್ರು ಎಂಬವನು ನಕ್ಸಲ್ ನಿಗ್ರಹದಳ ಎನ್‌ಕೌಂಟರ್‌ನಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ. ಈತನು ಪರಿಶಿಷ್ಟ ವರ್ಗಕ್ಕೆ ಸೇರಿದ ವ್ಯಕ್ತಿಯಾಗಿದ್ದು, ಅತ್ಯಂತ ಬಡತನದ ಹಿನ್ನೆಲೆಯಿಂದ ಬಂದವನಾಗಿರುತ್ತಾನೆ. ಕಳೆದ 20 ವರ್ಷಗಳಿಂದ ಈತನು ನಕ್ಸಲ್ ಚಳುವಳಿಯಲ್ಲಿ ಗುರುತಿಸಿಕೊಂಡು ಅನೇಕ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುತ್ತಾನೆ ಎಂದು ನಾವು ಮಾದ್ಯಮಗಳ ಮೂಲಕ ತಿಳಿದುಕೊಂಡಿರುತ್ತೇವೆ.

ಆದರೆ ಈ ಮೇಲೆ ಹೇಳಿದ ವಿಕ್ರಂ ಗೌಡ ಅಲಿಯಾಸ್ ವಿಕ್ರಂ ಗೌಡ್ಲು ಮೊನ್ನೆ ನಡೆದ ಪೊಲೀಸ್ ಕಾರ್ಯಾಚರಣೆಯಲ್ಲಿ ಪೋಲೀಸರ ಮೇಲೆ ಗುಂಡು ಹಾರಿಸಿ, ಪೊಲೀಸರು ತಮ್ಮ ರಕ್ಷಣೆಗೋಸ್ಕರ ಆತನ ಮೇಲೆ ಗುಂಡು ಹಾರಿಸಿದ ಘಟನೆಯಲ್ಲಿ ಕಳೆದುಕೊಂಡಿರುವುದು ನಮಗೆ ತಿಳಿದು ಬಂದಿದೆ.
ಸಿ.ಪಿ.ಐ.ಎಮ್.ಎಲ್ ಮಾಸ್ ಲೈನ್ ರಾಜ್ಯ ಸಮಿತಿ ಕರ್ನಾಟಕ ಮತ್ತು ಬರಹಗಾರ ನವೀನ್ ಸೂರಂಜೆ ಹಾಗೂ ಇನ್ನು ಅನೇಕರು ಈ ಕಾರ್ಯಾಚರಣೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಪತ್ರಿಕಾ ಹೇಳಿಕೆ ನೀಡಿರುತ್ತಾರೆ.

ಆದ್ದರಿಂದ ವಿಕ್ರಂ ಗೌಡ ಅಲಿಯಾಸ್ ವಿಕ್ರಂ ಗೌಡ್ಲು ಇವನ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ, ಸತ್ಯಾಸತ್ಯತೆಯನ್ನು ಕಂಡುಕೊಂಡು ಆತನ ಕುಟುಂಬಕ್ಕೆ ಸೂಕ್ತ ಪರಿಹಾರ ಮತ್ತು ನ್ಯಾಯ ಒದಗಿಸಿಕೊಡಬೇಕೇಂದು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ದ.ಸಂ‌ಸ ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ್ ಮಾಸ್ತರ್, ಜಿಲ್ಲಾ ಪ್ರಧಾನ ಸಂಚಾಲರಾದ ಮಂಜುನಾಥ್ ಗಿಳಿಯಾರು, ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ, ಶ್ಯಾಮ್ ಸುಂದರ್ ತೆಕ್ಕಟ್ಟೆ, ಮಂಜುನಾಥ್ ನಾಗೂರು, ಸುರೇಶ್ ಹಕ್ಲಾಡಿ, ಸಲಾಹುದ್ದೀನ್ ಶೇಖ್, ಅಝೀಝ್ ಉದ್ಯಾವರ,ಇದ್ರೀಸ್ ಹೂಡೆ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

1002272298 Udupi

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button