ಉಡುಪಿ, ಫೆ.3: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ವರ್ಷಗಲ ಹಿಂದೆ ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡ ನಾಲ್ಕನೆ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಫೆ.2ರಂದು ಲಕ್ನೋ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಧರ್ಮೇಂದ್ರ ಕುಮಾರ್ ಸುಹಾನಿ ಬಂಧಿತ ಆರೋಪಿ. 2021ರ ಜುಲೈ ತಿಂಗಳಿನಲ್ಲಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಮ್ರಗೋಡುವಿನಲ್ಲಿರುವ ಮಿಲನ ರೆಸಿಡೆನ್ಸಿಯಲ್ಲಿ ವಿಶಾಲ ಗಾಣಿಗ ಅವರ ಕೊಲೆಯಾಗಿದ್ದು ಈ ಪ್ರಕರಣದಲ್ಲಿ ಆರೋಪಿತರಾದ ಆಕೆಯ ಗಂಡ ರಾಮಕೃಷ್ಣ, ಸ್ವಾಮಿನಾಥನ್ ನಿಷಾದ್, ರೋಹಿತ್ ರಾಣಾ ಪ್ರತಾಪ್ ಅವರನ್ನು ಈಗಾಗಲೆ ಬಂಧಿಸಲಾಗಿದೆ.
ವಿಶಾಲ ಅವರ ಗಂಡ ರಾಮಕೃಷ್ಣ ಪ್ರಮುಖ ಆರೋಪಿತನಾಗಿದ್ದು ಈತನಿಗೂ ಹಾಗೂ ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಶಾದ್‌ನಿಗೂ ಪರಿಚಯ ಮಾಡಿಸಿ ವಿಶಾಲ ರವರ ಕೊಲೆಗೆ ಸಹಕರಿಸಿದ ಆರೋಪದಲ್ಲಿ ಧರ್ಮೇಂದ್ರ ಕುಮಾರ್ ಸುಹಾನಿನನ್ನು ಬ್ರಹ್ಮಾವರ ಠಾಣಾ ಪಿಎಸ್ಐ ಮಧು ಬಿ. ಇ ಹಾಗೂ ಠಾಣಾ ಸಿಬ್ಬಂದಿಗಳಾದ ಶಾಂತರಾಜ್, ಸುರೇಶ ಬಾಬು ತಂಡವು ಲಕ್ನೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ಫೆ.3ರಂದು ಬ್ರಹ್ಮಾವರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಧರ್ಮೇಂದ್ರ ಕೊಲೆ ಪ್ರಕರಣ ದಾಖಲಾದ ವಿಚಾರ ತಿಳಿದು ಕಳೆದ 3 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದನು