ಉಡುಪಿ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆಯ ಹಿನ್ನೆಲೆ ಬಿಗಿ ಬಂದೋಬಸ್ತು

ಉಡುಪಿ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಜ.22ರಂದು ಉಡುಪಿ ಜಿಲ್ಲೆಯಾ ದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ತಿಳಿಸಿದ್ದಾರೆ.

ಭದ್ರತೆಗಾಗಿ ಇಬ್ಬರು ಹೆಚ್ಚುವರಿ ಎಸ್ಪಿ, ಮೂವರು ಡಿವೈಎಸ್ಪಿ, 10 ಪೊಲೀಸ್ ನಿರೀಕ್ಷಕರು, 47 ಪೊಲೀಸ್ ಉಪನಿರೀಕ್ಷಕರು, 670 ಪೊಲೀಸ್ ಸಿಬಂದಿ, 100 ಗೃಹ ರಕ್ಷಕ ದಳದ ಸಿಬ್ಬಂದಿ, ಮೂರು ಕೆಎಸ್‌ಆರ್‌ಪಿ, ಎಂಟು ಜಿಲ್ಲಾ ಸಶಸ್ತ್ರ ಮೀಸಲು ಪಡೆ ತುಕಡಿಯನ್ನು ನಿಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಉಡುಪಿ ಜಿಲ್ಲೆಯಾದ್ಯಂತ ಯಾವುದೇ ಅಹಿತಕ ಘಟನೆ ನಡೆಯದಂತೆ ಮುನ್ನಚ್ಚರಿಕೆ ವಹಿಸಲಾಗಿದೆ. ಮೆರವಣಿಗೆ ಹಾಗೂ ಸಾರ್ವಜನಿಕ ಕಾರ್ಯಕ್ರಮ ಗಳಿಗೆ ಅನುಮತಿ ನೀಡಿಲ್ಲ ಎಂದು ಅವರು ತಿಳಿಸಿದ್ದಾರೆ

Latest Indian news

Popular Stories