ವಿಧಾನ ಪರಿಷತ್ ಉಪ ಚುನಾವಣೆ: ಬೈಂದೂರು ರಾಜು ಪೂಜಾರಿಗೆ ಕಾಂಗ್ರೆಸ್ ಟಿಕೆಟ್

ಉಡುಪಿ, ಅ.2: ರಾಜ್ಯ ವಿಧಾನ ಪರಿಷತ್‌ನ ದ.ಕ. ಸ್ಥಳೀಯ ಪ್ರಾಧಿಕಾರ ಕ್ಷೇತ್ರಕ್ಕೆ ಅ.21ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಬೈಂದೂರಿನ ಕೆ. ರಾಜು ಪೂಜಾರಿ ಅವರಿಗೆ ಟಿಕೆಟ್ ನೀಡಿದೆ.

ಕೆ. ರಾಜು ಪೂಜಾರಿ, ಉಡುಪಿಯ ಉದಯ ಶೆಟ್ಟಿ ಮುಣಿಯಾಲು, ಕಾರ್ಕಳದ ಡಿ.ಆರ್.ರಾಜು, ಉಡುಪಿಯ ಹರಿಪ್ರಸಾದ್ ರೈ, ಬಿ.ಭುಜಂಗ ಶೆಟ್ಟಿ ಮತ್ತು ಬಂಟ್ವಾಳದ ಚಂದ್ರಪ್ರಕಾಶ ಶೆಟ್ಟಿ ತುಂಬೆ ಅವರು ಪಕ್ಷದ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದರು.

ರಾಜು ಪೂಜಾರಿ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದನೆ ನೀಡಿರುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories