ಉಡುಪಿ | ಡಿ. 2-3 ರಂದು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ: ಮತದಾರರ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

ಉಡುಪಿ, ಡಿಸೆಂಬರ್ 01 : ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ -2024 ಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 2 ಹಾಗೂ 3 ರಂದು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಅಂಗವಾಗಿ ವಿಶೇಷ ಆಂದೋಲನ ಆಯೋಜಿಸುವಂತೆ ಚುನಾವಣಾ ಆಯೋಗ ನಿರ್ದೇಶಿಸಿರುತ್ತದೆ.

ಜಿಲ್ಲಾ ವ್ಯಾಪ್ತಿಯಲ್ಲಿ ಬರುವ 1112 ಮತಗಟ್ಟೆಗಳಲ್ಲಿ ಡಿ. 2 ಹಾಗೂ 3 ರಂದು ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಹಾಗೂ ಮತಗಟ್ಟೆ ಮಟ್ಟದ ಅಧಿಕಾರಿಗಳ ಮೇಲ್ವಿಚಾರಕ ರುಗಳು ಅವರಿಗೆ ವಹಿಸಿರುವ ಮತಗಟ್ಟೆ ವ್ಯಾಪ್ತಿಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ಮತಗಟ್ಟೆಗಳಲ್ಲಿ ಉಪಸ್ಥಿತರಿರುತ್ತಾರೆ.
ಜಿಲ್ಲೆಯ ಮತದಾರರು ಅವರ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂದು ಪರಿಶೀಲಿಸಬಹುದು ಹಾಗೂ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ನಮೂನೆ -6 ನ್ನು ಸಲ್ಲಿಸಬಹುದು. ವಲಸೆ ಅಥವಾ ಮರಣ ಹೊಂದಿದ್ದಲ್ಲಿ ಅಂತವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ನಮೂನೆ 7 ಹಾಗೂ ಮತದಾರರ ಪಟ್ಟಿಯಲ್ಲಿ ಯಾವುದಾದರೂ ತಿದ್ದುಪಡಿಗಳು ಇದ್ದಲ್ಲಿ ನಮೂನೆ 8 ನ್ನು ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಸಲ್ಲಿಸಬಹುದಾಗಿದೆ.
ಮೇಲೆ ತಿಳಿಸಲಾದ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಮತದಾರರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories