Udupi

ಉಡುಪಿ: ಮಹಿಳೆ ನಾಪತ್ತೆ

ಉಡುಪಿ:ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಕಾಡಬೆಟ್ಟು ಪುಳಿಮರ ಸಂಕ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಜ್ಯೋತಿ (34) ಎಂಬ ಮಹಿಳೆಯು ಆಗಸ್ಟ್ 06 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಉದ್ದ ಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ, ತೆಲುಗು ಹಾಗೂ ಲಮಾಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button