Udupi

ಉಡುಪಿ ನಗರಾಭಿವೃದ್ದಿ ಪ್ರಾಧಿಕಾರ ಅರ್ಜಿಗಳ ಬಗ್ಗೆ ಶಾಸಕ ಯಶ್ ಪಾಲ್ ಸುವರ್ಣ ಅಹವಾಲು ಸ್ವೀಕಾರ

ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ರವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅರ್ಜಿಗಳ ಬಗ್ಗೆ ಜುಲೈ 20 ಶನಿವಾರ ಪೂರ್ವಾಹ್ನ 11.30 ಕ್ಕೆ ಪ್ರಾಧಿಕಾರದ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

ಸಾರ್ವಜನಿಕರು ಪ್ರಾಧಿಕಾರದಲ್ಲಿ ಬಾಕಿ ಉಳಿದಿರುವ ಅರ್ಜಿಗಳು, ಸಮಸ್ಯೆಗಳ ಬಗ್ಗೆ ಶಾಸಕರಿಗೆ ಅಹವಾಲು ನೀಡಬಹುದಾಗಿದ್ದು, ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ ಎಂದು ಶಾಸಕರ ಕಚೇರಿಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button