ಎಪಿಎಂಸಿಯಲ್ಲಿನ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಬಗ್ಗೆ ದೂರುಗಳು ಬಂದಿದೆ; ತಪ್ಪಾಗಿರುವುದು ಕಂಡುಬಂದರೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು – ಶಾಸಕ ಯಶ್ಫಾಲ್ ಸುವರ್ಣ

ಎಪಿಎಂಸಿಯಲ್ಲಿನ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಬಗ್ಗೆ ದೂರುಗಳು ಬಂದಿವೆ. ಈ ಕುರಿತು ಇಲಾಖಾಧಿಕಾರಿಗಳಿಂದ ದಾಖಲೆ ತರಿಸಿ ಪರಿಶೀಲನೆ ನಡೆಸಲಾಗುವುದು. ಒಂದು ವೇಳೆ ಇದರಲ್ಲಿ ತಪ್ಪಾಗಿರುವುದು ಕಂಡುಬಂದರೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಾಸಕ ಯಶ್ ಪಾಲ್ ಸುವರ್ಣ ಭರವಸೆ ನೀಡಿದರು.


ಎಪಿಎಂಸಿ ನಿವೇಶನ ಹಂಚಿಕೆಯಲ್ಲಿ ಅಧಿಕಾರಿಗಳು ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿ ಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆ ರಕ್ಷಣಾ ಸಮಿತಿಯ ನೇತೃತ್ವದಲ್ಲಿ ಆದಿಉಡುಪಿಯ ಎಪಿಎಂಸಿ ವಠಾರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಮನವಿ ಸ್ವೀಕರಿಸಿ ಮಾತನಾಡಿದರು.


ನಗರಸಭೆ ಸದಸ್ಯ ವಿಜಯ ಕೊಡವೂರು, ಉಡುಪಿ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಸುಭಾಷಿತ್ ಕುಮಾರ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಉಡುಪಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಅಧ್ಯಕ್ಷ ಅಂಡಾರು ದೇವಿ ಪ್ರಸಾದ್ ಶೆಟ್ಟಿ, ರಾಜ್ಯ ರೈತ ಮೋರ್ಚಾ ರ್ಕಾಯಕಾರಿಣಿ ಸದಸ್ಯ ರಾಘವೇಂದ್ರ ಉಪ್ಪೂರು, ಕೊಡವೂರು ದೇವಸ್ಥಾನದ ಮಾಜಿ ಮೊಕ್ತೇಸರ ರಾಘವೇಂದ್ರ ರಾವ್, ಎಂಪಿಎಂಸಿ ಮಾಜಿ ಅಧ್ಯಕ್ಷ ಶ್ಯಾಮ್ ಪ್ರಸಾದ್ ಭಟ್, ಮಾಜಿ ಸದಸ್ಯರಾದ ರಮಾಕಾಂತ್ ಕಾಮತ್, ರಾಘವೇಂದ್ರ, ಆಶಾ, ವಿವಿಧ ಸಂಘಟನೆ ಗಳ ಮುಖಂಡರಾದ ಚಿನ್ಮಯ ಮೂರ್ತಿ, ಅಜಿತ್ ಕುಮಾರ್, ಸುಜಯ್ ಪೂಜಾರಿ, ಸಿದ್ಧಬಸಯ್ಯ ಸ್ವಾಮಿ, ಪ್ರಭಾಕರ ಪೂಜಾರಿ, ಮಂಜು ನಾಥ್ ಶೆಟ್ಟಿಗಾರ್, ಟಿ.ಜಿ.ಹೆಗ್ಡೆ, ವರ್ತಕರಾದ ಫಯಾಜ್ ಅಹ್ಮದ್, ಪ್ರಭು ಗೌಡ, ಜಗದೀಶ್ ಬಳ್ಳಾರಿ ಮೊದಲಾದವರು ಉಪಸ್ಥಿತರಿದ್ದರು

Latest Indian news

Popular Stories