ಉ.ಕ | ಪಲ್ಸ್ ಪೊಲೀಯೋ ಕಾರ್ಯಕ್ರಮ ಜಿಲ್ಲೆಯಲ್ಲಿ ಯಶಸ್ವಿ

ಕಾರವಾರ : ಜಿಲ್ಲಾ ಆಸ್ಪತ್ರೆ ಕಾರವಾರದಲ್ಲಿ ಇಂದು ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕ ಸತೀಶ ಸೈಲ್ ಹಾಗೂ ಗಂಗೂಬಾಯಿ ಮಾನಕರ್ ಚಾಲನೆ ನಿಡಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕರು ಜಿಲ್ಲೆಯಲ್ಲಿರುವ ಎಲ್ಲಾ ಮಕ್ಕಳು ಪಲ್ಸ್ ಪೋಲಿಯೋ ಲಸಿಕೆಯನ್ನು ತಪ್ಪದೇ ಪಡೆದುಕೊಳ್ಳುವಂತೆ ತಿಳಿಸಿದರು.
ಜಿಲ್ಲೆಯ ನಗರ ಪ್ರದೇಶಗಳಲ್ಲಿ 25733 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 72740 ಒಟ್ಟೂ 98473 0-5 ವರ್ಷದೊಳಗಿನ ಮಕ್ಕಳನ್ನು ಆರೋಗ್ಯ ಇಲಾಖೆ ಗುರುತಿಸಿದ್ದು, ಜಿಲ್ಲೆಯ ಎಲ್ಲ ಇಲಾಖೆಗಳು ಈ ಕಾರ್ಯಕ್ಕೆ ಸಹಕಾರ ನೀಡುತ್ತಿವೆ. ಜಿಲ್ಲೆಯಲ್ಲಿ ಒಟ್ಟು 878 ಪಲ್ಸ ಪೊಲಿಯೋ ಬೂತ್ಗಳನ್ನು ನಿರ್ಮಿಸಿದ್ದು. ಆರೋಗ್ಯ ಇಲಾಖೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ಸದರಿ ಕಾರ್ಯಕ್ರಮದ ಉಪಯೋಗವನ್ನು ಸಾರ್ವಜನಿಕರು ಪಡೆದುಕೊಂಡು 0-5 ವರ್ಷದ ಮಕ್ಕಳು ಲಸಿಕೆಯಿಂದ ವಂಚಿತರಾಗದಂತೆ ಎಲ್ಲಾ ಮಕ್ಕಳಿಗು ಲಸಿಕೆ ಕೋಡಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಕಾರ್ಯಕ್ರಮದಲ್ಲಿ ಪುರಸಭೆ ಆಯುಕ್ತರು, ಜಿಲ್ಲಾ ಶಸ್ತç ಚಿಕಿತ್ಸಕರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು, ರೋಟರಿ ಕ್ಲಬ್, ಲಯನ್ಸ ಕ್ಲಬ್, ರೆಡ್ ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.
…….

Latest Indian news

Popular Stories