ಟೀ ಮಾಡುವ ವೇಳೆ ಸಿಲಿಂಡರ್ ಸ್ಫೋಟಗೊಂಡು 11 ತಿಂಗಳ ಮಗು ಸೇರಿದಂತೆ 4 ಮಂದಿ ಸಾವು

ಉತ್ತರ ಪ್ರದೇಶ: ಡಿಯೋರಿಯಾ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಭಾರಿ ಅಪಘಾತ ಸಂಭವಿಸಿದೆ. ಇಲ್ಲಿ ಮಹಿಳೆಯೊಬ್ಬರು ಮನೆಯಲ್ಲಿ ಟೀ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಟೀ ಮಾಡುತ್ತಿದ್ದ ಮಹಿಳೆ ಹಾಗೂ ಆಕೆಯ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.

ಭಲುನಿ ಪ್ರದೇಶದ ದುಮ್ರಿ ಗ್ರಾಮದಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮಾಹಿತಿ ಪ್ರಕಾರ, ಶಿವಶಂಕರ್ ಗುಪ್ತಾ ಅವರ ಪತ್ನಿ ಆರತಿ ದೇವಿ (35) ಬೆಳಗ್ಗೆ ಟೀ ಮಾಡುತ್ತಿದ್ದಾಗ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ. ಇದರಲ್ಲಿ ಆರತಿ ಅವರ ಮಕ್ಕಳಾದ ಆಂಚಲ್ (14), ಕುಂದನ್ (12) ಮತ್ತು 11 ತಿಂಗಳ ಸೃಷ್ಟಿ ಕೂಡ ಪ್ರಾಣ ಕಳೆದುಕೊಂಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಅವರು ತನಿಖಾ ವರದಿಯನ್ನು ಸರ್ಕಾರಕ್ಕೆ ಕಳುಹಿಸಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವಿಧಿವಿಜ್ಞಾನ ಮತ್ತು ಅಗ್ನಿಶಾಮಕ ದಳದ ತಂಡಗಳು ಸಹ ಸ್ಥಳದಲ್ಲಿವೆ. ಮೃತ ಮಹಿಳೆಯ ಪತಿ ಶಿವಶಂಕರ್ ಗುಪ್ತಾ ಹೊರಗಡೆ ಹೋಗಲು ತಯಾರಾಗುತ್ತಿದ್ದರು. ಈ ಸಮಯದಲ್ಲಿ ಚಹಾ ತಯಾರಿಸುತ್ತಿದ್ದಾಗ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Latest Indian news

Popular Stories