ಆಟೋ ಮತ್ತು ಟಾಟಾ ಏಸ್ ನಡುವೆ ಭೀಕರ ಅಪಘಾತ | ನಾಲ್ವರಿಗೆ ಗಂಭೀರ ಗಾಯ

ಕಾರವಾರ: ಭಟ್ಕಳ ಸಮೀಪ ರಾಷ್ಟ್ರೀಯ ಹೆದ್ದಾರಿ ಬೆಳಕೆ ಗ್ರಾಮದ ಬಳಿ ಆಟೋ ಮತ್ತು ಟಾಟಾ ಏಸ್ ನಡುವೆ ಭೀಕರ ಅಪಘಾತ ಸಂಬಂಧಿಸಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

IMG 20240215 WA0029 Uttara Kannada, Featured Story

ಅಪಘಾತದಲ್ಲಿ ಮಹಿಳೆ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಟೋ ಬೆಳಕೆ ಕಡೆಯಿಂದ ಭಟ್ಕಳದ ಕಡೆ ಚಲಿಸುತ್ತಿತ್ತು. ಟಾಟಾ ಏಸ್ ಭಟ್ಕಳದಿಂದ ಶಿರೂರು ಕಡೆ ಚಲಿಸುತ್ತಿತ್ತು ಎಂದು ಹೇಳಲಾಗಿದೆ. ಅಪಘಾತದಲ್ಲಿ ಆಟೋ ಚಾಲಕ ಸಹಿತ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡ ನಾಲ್ವರಲ್ಲಿ ಇಬ್ಬರನ್ನು ಮಣಿಪಾಲ ಹಾಗೂ ಇನ್ನಿಬ್ಬರನ್ನ ಕುಂದಾಪುರ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದ ರಭಸಕ್ಕೆ ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories