ಕಾರವಾರ:ಕಾರವಾರ ದ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂರ್ಪಕ ಇಲಾಖೆ ಏಪರ್ಡಿಸಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳ ವಸ್ತುಪ್ರದರ್ಶನವು ಸಾರ್ವಜನಿಕರ ಕಣ್ಮನ ಸೆಳೆಯುತ್ತಿದೆ.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹ ಲಕ್ಷ್ಮೀ, ಶಕ್ತಿ, ಯುವ ನಿಧಿ, ಗೃಹ ಜ್ಯೋತಿ,ಅನ್ನಭಾಗ್ಯ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳ ಮಾಹಿತಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಚಾರ ಪಡಿಸಿದೆ.
ವಸ್ತು ಪ್ರದರ್ಶನದಲ್ಲಿ ಪ್ರದರ್ಶಿಸಿದ ವಿವಿಧ ಯೋಜನೆಗಳ ಮಾಹಿತಿಯಲ್ಲಿ,ಹಸಿವು ಮುಕ್ತ ಕರ್ನಾಟಕ ವನ್ನಾಗಿಸುವ ರಾಜ್ಯ ಸರ್ಕಾರದ ಮಹತ್ತರ ಯೋಜನೆಯಾದ ಅನ್ನಭಾಗ್ಯ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಉಚಿತ 10 ಕೆ.ಜಿ.ಆಹಾರಧಾನ್ಯ ಸೇರಿದಂತೆ ಡಿಬಿಟಿ ಮೂಲಕ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ 5 ಕೆ.ಜಿ. ಅಕ್ಕಿ ಬದಲಿಗೆ ರೂ 170 ರಂತೆ 4.02 ಕೋಟಿ ಫಲಾನುಭವಿಗಳಿಗೆ ರೂ 4595 ಕೋಟಿ ವರ್ಗಾಯಿಸುವುದರ ಮೂಲಕ ಬಡವರ ಕುಟುಂಬದ ಆರ್ಥಿಕ ಹೊರೆಯನ್ನು ಕಡಿಮೆಗೊಳಿಸಿ ಬಲವರ್ಧನೆ ಗೆ ಸಹಾಯಕವಾಗಿದೆ.
ಮಹಿಳೆಯರ ಸ್ವಾವಲಂಬನೆ ಬದುಕು ನಿರ್ಮಿಸಲು ಶಕ್ತಿ ಯೋಜನೆಯಡಿ 136 ಕೋಟಿ ಮಹಿಳೆಯರು, ಯುವತಿಯರು, ಹಾಗೂ ವಿದ್ಯಾರ್ಥಿನಿಯರು ಉಚಿತ ಪ್ರಯಾಣ ಮಾಡುವುದರ ಮೂಲಕ ಶಕ್ತಿ ಯೋಜನೆ ಮಹಿಳೆಯರ ಸಬಲೀಕರಣಕ್ಕೆ ಮಾದರಿಯಾಗಿದೆ.
ಪ್ರತಿ ಮನೆಯಲ್ಲಿಯೂ ಭಾಗ್ಯದ ಬೆಳಕು ಬೆಳಗಬೇಕು ಎನ್ನುವ ಆಶಯದಂತೆ ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ ವರೆಗೆ ವಿದ್ಯುತ್ ಉಚಿತ ನೀಡುವುದರ ಮೂಲಕ 5 ಕೋಟಿ ಜನರಿಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಲಾಗಿದೆ.
ಕರ್ನಾಟಕದ ಮಹಿಳೆಯರು ಸ್ವ ಸಾಮರ್ಥ್ಯ ಸ್ವಯಂ ಸ್ಥೈರ್ಯ ಹಾಗೂ ಸ್ವಯಂ ಗೌರವದಿಂದ ಜೀವನ ಸಾಗಿಸಲು ಪ್ರತಿ ಮಾಹೆ ಪ್ರತಿ ಮಹಿಳೆಯರಿಗೆ ರೂ 2000 ರಂತೆ ರೂ 11726 ಕೋಟಿ ರೂಗಳನ್ನು ನೇರವಾಗಿ 1.09 ಕೋಟಿ ಯಜಮಾನಿಯರಿಗೆ ವರ್ಗಾಯಸಿ ವಿಶ್ವ ದಾಖಲೆ ನಿರ್ಮಿಸಿದೆ.
ಯುವಕರ ಶ್ರೇಯೋಭಿವೃದ್ಧಿಗಾಗಿ ಯುವನಿಧಿ ಯೋಜನೆಯಡಿ 2023 ರಲ್ಲಿ ಉತ್ತೀರ್ಣರಾದ ಪದವೀಧರರು ಹಾಗೂ ಡಿಪ್ಲೋಮಾ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ.
ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಲ್ಲಿಕೆಯಾದ 15068 ಕುಂದು ಕೊರತೆಗಳಲ್ಲಿ 9780 ಕುಂದು ಕೊರತೆಗಳನ್ನು ವಿಲೇ ಮಾಡಲಾಗಿದೆ. ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡುವುದರ ಮೂಲಕ ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರಾದ ಜಮೀನುಗಳಿಗೆ ಅನಧಿಕೃತ ಪರಭಾರೆಯಿಂದ ರಕ್ಷಣೆ ಸೇರಿದಂತೆ ಸಕ್ಷಮ ಪ್ರಾಧಿಕಾರದ ಯಾವುದೇ ಕಾಲಮಿತಿ ಇಲ್ಲದೆ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಸಾಮಾಜಿಕ ನ್ಯಾಯದ ಮೂಲ ಹರಿಕಾರನಿಗೆ ಕರ್ನಾಟಕ ಸರ್ಕಾರದ ಗೌರವ ವಿಶ್ವಗುರು ಶ್ರೀ ಜಗಜ್ಯೋತಿ ಬಸವೇಶ್ವರರು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಣೆ ಮಾಡುವುದರ ಮೂಲಕ ಮಹತ್ತರ ನಿಲುವನ್ನು ತೆಗೆದುಕೊಂಡಿದೆ.
ಗ್ಯಾರ0ಟಿ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಮಹತ್ತರ ಯೋಜನೆಗಳ ಮಾಹಿತಿಯನ್ನು ಈ ವಸ್ತು ಪ್ರದರ್ಶನದಲ್ಲಿ ಪ್ರದರ್ಶಿಸಲಾಗಿದ್ದು, ಮಾರ್ಚ್ 14 ರ ವರೆಗೆ ನಡೆಯುವ ಈ ವಸ್ತು ಪ್ರದರ್ಶನ ಕ್ಕೆ ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ಬಿ.ಶಿವಕುಮಾರ್ ತಿಳಿಸಿದ್ದಾರೆ.
……