
Featured StoryUttara Kannada
ಬಿಕಾಂ ಪದವಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ
ಕಾರವಾರ : ಪದವಿ ಪರೀಕ್ಷೆಯಲ್ಲಿ ಫೇಲಾಗುತ್ತೇನೆ ಎಂಬ ಭಯ ದಿಂದ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಕನ್ನಡ ಸಿದ್ದಾಪುರ ಕಾನಸೂರಿನ ಕಲಕಟ್ಟೆ ಮಜಿರೆಯಲ್ಲಿ ನಡೆದಿದೆ.
ಅಭಿರಾಮ ವೆಂಕಟರಮಣ ಹೆಗಡೆ ( 20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಕಾನಸೂರಿನ ಅಭಿರಾಮ ಹೆಗಡೆ ಉಡುಪಿಯಲ್ಲಿ ಬಿಕಾಂ ಪದವಿ ಎರಡನೇ ವರ್ಷದಲ್ಲಿ ಓದುತ್ತಿದ್ದ . ಅಭಿರಾಮ ಹೆಗಡೆಗೆ ಪರೀಕ್ಷೆಯಲ್ಲಿ ಫೇಲಾಗುತ್ತೇನೆ ಎಂದು ಮನಸ್ಸಿಗೆ ಹಚ್ಚಿಕೊಂಡಿದ್ದ. ಮೂರು ಸಬ್ಜಕ್ಟ ಪರೀಕ್ಷೆ ಚೆನ್ನಾಗಿ ಬರೆದಿಲ್ಲ. ಫೇಲಾಗುವೆ ಎಂಬ ಭಯದಿಂದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಪೊಲೀಸರು ತೆರಳಿ ಮಾಹಿತಿ ಕಲೆಹಾಕಿ ಶವವನ್ನು ಸಿದ್ದಾಪುರದ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ವಿದ್ಯಾರ್ಥಿ ಡೆತ್ ನೋಟ್ ಬರೆದಿದ್ದಾನೆ ಎನ್ನಲಾಗಿದೆ. ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.




