ಪ್ಲಾಸ್ಟಿಕ್ ಧ್ವಜ ಬಳಸುವುದು ಹಾಗೂ ಮಾರಾಟ ನಿಷೇಧ

ಕಾರವಾರ : ರಾಷ್ಟ್ರೀಯ ಗೌರವ ಕಾಯ್ದೆ, 1971 ಮತ್ತು ಭಾರತದ ಧ್ವಜ ಸಂಹಿತೆ 2012 ರಡಿ ಎಲ್ಲಾ ಸರ್ಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕರು ಪ್ರಮುಖ ರಾಷ್ಟ್ರೀಯ ಸಾಂಸ್ಕೃತಿಕ ಮತ್ತು ಕ್ರೀಡಾಕೂಟಗಳ ಸಂದರ್ಭಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸದಂತೆ ತಿಳಿಸಲಾಗಿದೆ.

ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಧ್ವಜವನ್ನು (ಪ್ಲಾಸ್ಟಿಕ್ ಕಡ್ಡಿ ಸಹಿತ ಪ್ಲಾಸ್ಟಿಕ್ ಧ್ವಜ) ಬಳಸದಂತೆ ಕೇವಲ ಪ್ಲಾಸ್ಟಿಕ್ ಬಾವುಟಗಳನ್ನು ಬಳಸುವ ಬದಲು ಕಾಗದ ಮತ್ತು ಬಟ್ಟೆಗಳಿಂದ ತಯಾರಿಸಿದ ಬಾವುಟಗಳನ್ನು (ಮರದ ಕಡ್ಡಿ, ಪೇಪರ ಕಡ್ಡಿ ಸಹಿತ ಕಾಗದ, ಬಟ್ಟೆಯ ಧ್ವಜ ಏಕ ಬಳಕೆಯ (ಪ್ಲಾಸ್ಟಿಕ್ ವಸ್ತುಗಳಾದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಪ್ಲೆಕ್ಸ್, ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಸ್ಟ್ರಾಗಳು, ಕ್ಲಿಂಗ್ ಫಿಲ್ಮ್ಸ್ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೊಕಾಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್ ನಿಂದ ತಯಾರಾದಂತಹ ವಸ್ತುಗಳು.) ಸಾರ್ವಜನಿಕರು ಬಳಸದಂತೆ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ತಿಳಿಸಿದ್ದಾರೆ.

Latest Indian news

Popular Stories