ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ-2;ನಿಷೇಧಾಜ್ಞೆ ಜಾರಿ

ಕಾರವಾರ : ಕಂದಾಯ ಇಲಾಖೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿಗೆ ಹಾಗೂ ಜಿಟಿಟಿಸಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಯುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ-2 ಅ.26 ಮತ್ತು 27ರಂದು ಜಿಲ್ಲೆಯ 15 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿವೆ.

ಸದರಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಬೇಕಾಗಿರುವುದರಿಂದ, ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿಗೆ ಹಾಗೂ ಜಿಟಿಟಿಸಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಯುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ-2, ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಯಾವುದೇ ತರಹದ ಅವ್ಯವಹಾರ ಕಾನೂನು ಬಾಹಿರ ಚಟುವಟಿಕೆಗಳು ಅಥವಾ ಶಾಂತತಾ ಭಂಗ ಆಗದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸಭೆ ಸಮಾರಂಭಗಳನ್ನು ನಡೆಯುತ್ತಿದ್ದಲ್ಲಿ ಧ್ವನಿವರ್ಧಕಗಳನ್ನು ತಡೆಯುವ ನಿಟ್ಟಿನಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಪರೀಕ್ಷಾ ದಿನದಂದು ಪರೀಕ್ಷಾ ಸಮಯದಿಂದ ಪರೀಕ್ಷಾಅವಧಿ ಮುಗಿಯುವವರೆಗೆ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಕಾಯ್ದೆ 2023 ಕಲಂ 163ರಂತೆ ಜಿಲ್ಲಾಧಿಕಾರಿ
ಕೆ. ಲಕ್ಷ್ಮಿಪ್ರಿಯಾ ನಿಷೇಧಾಜ್ಞೆಯನ್ನು ಹೊರಡಿಸಿರುತ್ತಾರೆ.

ಸದರಿ ಅವಧಿಯಲ್ಲಿ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿರುವ ಝೆರಾಕ್ಸ್ ಅಂಗಡಿ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಇಲೆಕ್ಟ್ರಾನಿಕ್ಸ್ ಅಂದರೆ, ಮೊಬೈಲ್ ಫೋನಗಳು, ಸ್ಮಾರ್ಟ ವಾಚ್, ವೈರ್ ಲೆಸ್, ಬ್ಲೂಟೂತ್, ಇಯರ್ ಹೆಡ್ ಫೋನ್ ಗಳನ್ನು ತರಲು ನಿಷೇಧಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು‌ ತಿಳಿಸಿದ್ದಾರೆ.
………..

Latest Indian news

Popular Stories