ಕಾಂಗೆಸ್ ಮತ್ತೆ ಅಧಿಕಾರಕ್ಕೆ ಬಂದರೆ ರೈತರ ಸಾಲ ಸಂಪೂರ್ಣ ಮನ್ನಾ: ಬಘೇಲ್ ಘೋಷಣೆ

ಚತ್ತೀಸ್‌ಗಢ: ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಛತ್ತೀಸ್ ಗಢ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ರೈತರ ಸಾಲ ಸಂಪೂರ್ಣವಾಗಿ ಮನ್ನಾ ಮಾಡಲಾಗುವುದು ಎಂದು ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಘೋಷಣೆ ಮಾಡಿದ್ದಾರೆ.

ಮೊದಲ ಹಂತದ ಮತದಾನಕ್ಕೆ ಇನ್ನು ಕೇವಲ ಹದಿನೈದು ದಿನಗಳು ಬಾಕಿ ಉಳಿದಿದ್ದು, ಶಕ್ತಿ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅನ್ನು ಮತ್ತೆ ಅಧಿಕಾರಕ್ಕೆ ತಂದರೆ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

ಜಾತಿ ಗಣತಿ, ಎಕರೆಗೆ 20 ಕ್ವಿಂಟಾಲ್ ಭತ್ತ ಖರೀದಿ, 17.5 ಲಕ್ಷ ಜನರಿಗೆ ಮನೆ ಮತ್ತು ಈಗ ಕೃಷಿ ಸಾಲ ಮನ್ನಾ. ನಾವು ಇನ್ನೂ ಹಲವು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಬಘೇಲ್ ತಿಳಿಸಿದ್ದಾರೆ.

Latest Indian news

Popular Stories