ಕಾರವಾರ : ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಅಕ್ಷರ ದಾಸೋಹದ ಆಹಾರ ಪದಾರ್ಥಗಳ ಸರಬರಾಜು ಮತ್ತು ಮಕ್ಕಳಿಗೆ ನೀಡುವ ಆಹಾರದ ಗುಣಮಟ್ಟದ ಕುರಿತಂತೆ ಯಾವುದೇ ದೂರುಗಳು ಬಂದಲ್ಲಿ ಸಂಬಂದಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಎಚ್ಚರಿಕೆ ನೀಡಿದರು.
ಅವರು ಸೋಮವಾರ ಶಿರವಾಡದ ಶಾಲೆಯೊಂದರ ಮತಗಟ್ಟೆಗೆ ಭೇಟಿ ನೀಡಿ ಮತಗಟ್ಟೆ ಪರಿಶೀಲಿಸಿದ, ನಂತರ ಶಾಲೆಯ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು.
ನಂತರ ವಿದ್ಯಾರ್ಥಿಗಳೊಂದಿಗೆ ನೆಲದಲ್ಲೇ ಕುಳಿತು ಊಟ ಮಾಡುವ ಮೂಲಕ ಅಕ್ಷರ ದಾಸೋಹ ದಲ್ಲಿ ವಿತರಿಸುವ ಆಹಾರದ ಗುಣಮಟ್ಟವನ್ನು ಜಿಲ್ಲಾಧಿಕಾರಿಗಳು ಖುದ್ದು ಪರೀಕ್ಷಿಸಿದರು.
ಜಿಲ್ಲೆಯಲ್ಲಿ ಅಕ್ಷರ ದಾಸೋಹ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಆಹಾರದಲ್ಲಿ ಉತ್ತಮ ಗುಣಮಟ್ಟ ಮತ್ತು ರುಚಿಯಿಂದ ಕೂಡಿರುವ ಆಹಾರವನ್ನು ನೀಡಬೇಕು.
ಆಹಾರ ತಯಾರಿಕೆಗೆ ಸರಬರಾಜು ಆಗುವ ಆಹಾರ ಪದಾರ್ಥಗಳನ್ನು ಸೂಕ್ತ ರೀತಿಯಲ್ಲಿ ಸಂರಕ್ಷಿಸಿ ಬಳಸುವಂತೆ ಹಾಗೂ ಆಹಾರ ತಯಾರಿಕಾ ಕೊಠಡಿಯಲ್ಲಿ ಮತ್ತು ಆಹಾರ ತಯಾರಿಕೆಗೆ ಬಳಸುವ ಪಾತ್ರೆಗಳಲ್ಲಿ ಗರಿಷ್ಠ ಶುಚಿತ್ವವನ್ನು ಕಾಪಾಡಬೇಕು, ಇವುಗಳ ಕುರಿತಂತೆ ಯಾವುದೇ ದೂರುಗಳು ಕೇಳಿ ಬಂದಲ್ಲಿ ಸಂಬಂಧಪಟ್ಟ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಕಾರವಾರ ಡಿಡಿಪಿಐ ಲತಾ ನಾಯ್ಕ್ ಉಪಸ್ಥಿತರಿದ್ದರು.
…….