Uttara Kannada

ದೆಹಲಿ :ಹೆಚ್ಚಿದ ವಾಯುಮಾಲಿನ್ಯದ ಕಾರಣ ಸೋನಿಯಾ ಗಾಂಧಿ ಜೈಪುರಕ್ಕೆ ಶಿಫ್ಟ್

ದೆಹಲಿ :ದಿನ ಕಳೆದಂತೆ ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ಜೈಪುರಕ್ಕೆ ಸ್ಥಳಾಂತರಗೊಂಡಿದ್ದಾರೆ.

ದೆಹಲಿಯಲ್ಲಿ ಮಾಲಿನ್ಯದಿಂದ ಉಂಟಾಗುವ ವಿಷಪೂರಿತ ಗಾಳಿಯನ್ನು ತಪ್ಪಿಸಲು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಜೈಪುರಕ್ಕೆ ಸ್ಥಳಾಂತರಗೊಂಡಿದ್ದು, ಕೆಲವು ದಿನಗಳ ಕಾಲ ಅಲ್ಲಿಯೇ ತಂಗಲಿದ್ದಾರೆಂದು ತಿಳಿದು ಬಂದಿದೆ.

ಸೋನಿಯಾ ಗಾಂಧಿ ಬಹಳ ದಿನಗಳಿಂದ ಅಸ್ತಮಾದಿಂದ ಬಳಲುತ್ತಿದ್ದು, ಈ ನಡುವಲ್ಲೇ ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಿರುವ ಹಿನ್ನೆಲೆಯಲ್ಲಿ ವಿಷಕಾರಿ ಗಾಳಿಯು ಅಪಾಯಕಾರಿ ಎಂದು ವೈದ್ಯರು ಹೇಳಿದ್ದಾರೆ, ಈ ಹಿನ್ನೆಲೆಯಲ್ಲಿ ಸೋನಿಯಾ ಅವರು ಜೈಪುರಕ್ಕೆ ಸ್ಥಳಾಂತರಗೊಂಡಿದ್ದಾರೆಂದು ಹೇಳಲಾಗುತ್ತಿದೆ.

ದೆಹಲಿಯಲ್ಲಿ ದೀಪಾವಳಿ ನಂತರ ಮಾಲಿನ್ಯ ಮತ್ತೊಮ್ಮೆ ಹೆಚ್ಚಾಗಿದೆ. ದೆಹಲಿಯಲ್ಲಿ ಬೆಳಗ್ಗೆ 8 ಗಂಟೆಗೆ ವಾಯು ಗುಣಮಟ್ಟ ಸೂಚ್ಯಂಕ 435ರಲ್ಲಿ ದಾಖಲಾಗಿದೆ. ದೆಹಲಿ NCR ನಲ್ಲಿ ವೇಗವಾಗಿ ಹೆಚ್ಚುತ್ತಿರುವ ಮಾಲಿನ್ಯದಿಂದಾಗಿ, ಜನರು ಮತ್ತೊಮ್ಮೆ ಕಣ್ಣುಗಳಲ್ಲಿ ಕಿರಿಕಿರಿ ಮತ್ತು ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button