ಉ.ಕ | ಮಾಜಾಳಿಯಲ್ಲಿ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಗಂಗೂಬಾಯಿ ಭೇಟಿ

ಕಾರವಾರ : ಲೋಕಸಭಾ ಚುನಾವಣಾ ಪ್ರಯುಕ್ತ ಮಾಜಾಳಿಯಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ರವಿವಾರ ರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚೆಕ್ ಪೋಸ್ಟ್ ನಲ್ಲಿ ದಿನದ 24 ತಾಸು ಸಿಬ್ಬಂದಿಗಳು ಹೆಚ್ಚಿನ ನಿಗಾ ವಹಿಸಿ ಕಾರ್ಯ ನಿರ್ವಹಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಮತ್ತೊಂದು ಚೆಕ್ ಪೋಸ್ಟ್ ನಲ್ಲಿ
ರವಿವಾರ ಸಂಜೆ ಗೋವಾ , ಕರ್ನಾಟಕ ಗಡಿ ಭಾಗದ ಉತ್ತರ ಕನ್ನಡ ಜಿಲ್ಲೆಯಲ್ಲಿ ವಾಹನ ತಪಾಸಣೆಯ ವೇಳೆ ಹಣ ದೊರೆತಿದೆ.

ಅನಮೋಡ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದ 2 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದು , ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.

……..

Latest Indian news

Popular Stories