ಸಾಧನೆಯ ಹಾದಿಯಲ್ಲಿ ಗುರಿಮುಟ್ಟುವ ವರೆಗೆ ನಿಲ್ಲದಿರಿ : ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ : ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಉನ್ನತ ಸಾಧನೆಗಳನ್ನು ಮಾಡುವ ಗುರಿಗಳನ್ನು ಹೊಂದಬೇಕು ಹಾಗೂ ಆ ಗುರಿ ಸಾಧನೆಯ ಹಾದಿಯಲ್ಲಿ ಯಾವುದೇ ಅಡೆ ತಡೆಗಳು ಬಂದರೂ ಎದೆಗುಂದದೇ , ಪ್ರಯತ್ನ ಮುಂದುವರೆಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಈ ಬಾರಿಯ ದ್ವಿತಿಯ ಪಿಯುಸಿ ಪರೀಕ್ಷೆಯಲ್ಲಿ ಮೊದಲ ಮೂರು ಸ್ಥಾನ ಪಡೆದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ನಗದು ಬಹುಮಾನ ಮತ್ತು ಸನ್ಮಾನ ನೆರವೇರಿಸಿ ಮಾತನಾಡಿದರು.

ಪ್ರಸ್ತುತ ಸ್ಪರ್ಧಾತ್ಮಕ ಯುಗವಾಗಿದೆ, ಸಾಧನೆಯ ಗುರಿಯಡೆಗೆ ನಿರಂತರ ಪ್ರಯತ್ನಪಟ್ಟು ತಮ್ಮ ಭವಿಷ್ಯವನ್ನು ಕಟ್ಟಿಕೊಳ್ಳಬೇಕು. ನಾಗರೀಕ ಸೇವಾ ಪರೀಕ್ಷೆಗಳ ಮೂಲಕ ಉನ್ನತ ಅಧಿಕಾರಿಗಳಾಗಬೇಕು ಎಂದರು.

ವಯಕ್ತಿಕವಾಗಿ ನಗದು ನೀಡಿ ಗೌರವಿಸಿದ ಜಿಲ್ಲಾಧಿಕಾರಿ

ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ರೂ.10000, ದ್ವಿತೀಯ ಸ್ಥಾನ ಪಡೆದವರಿಗೆ ರೂ.5000 ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ರೂ.2500 ಗಳ ನಗದು ಬಹುಮಾನ ವೈಯಕ್ತಿಕವಾಗಿ ನೀಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಎಲ್ಲಾ ವಿದ್ಯಾರ್ಥಿಗಳನ್ನು ಫಲ ತಾಂಬೂಲ ಹಾಗೂ ಶಾಲು ಹೊದೆಸಿ ಸನ್ಮಾನಿಸಿದರು.

ಕಲಾ ವಿಭಾಗದಲ್ಲಿ ಮೊದಲ ಮೂರು ಸ್ಥಾನ ಪಡೆದ , ಅಂಕಿತ ಸತೀಶ್ ಹೆಗ್ಡೆ, ದಿವ್ಯ ಎಸ್. ಗುಣೇಕರ್, ಝೈಬಾ ಎಂ . ಮಿರ್ಚಿವಾಲೆ, ವಾಣಿಜ್ಯ ವಿಭಾಗದ ಧ್ಯಾನ್ ರಾಮಚಂದ್ರ ಭಟ್, ಅಮಿತ್ ಎಂ. ಹೆಗ್ಡೆ, ರಮ್ಯಾ ಹೆಗ್ಡೆ, ವಿಜ್ಞಾನ ವಿಭಾಗದ ಸಿಂಚನ ಗಣಪತಿ ಹೆಗ್ಡೆ, ಶ್ರಾವ್ಯಾ ಶ್ರೀಧರ ಭಟ್, ಯಶಸ್ವಿನಿ ಎಸ್ ಹೆಗ್ಡೆ, ಸನ್ಮತಿ ಹೆಗ್ಡೆ ಅವರನ್ನು ಜಿಲ್ಲಾಧಿಕಾರಿಗಳು ನಗದು ಬಹುಮಾನ ನೀಡಿ ಸನ್ಮಾನಿಸಿದರು.

ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸತೀಶ್ ನಾಯ್ಕ್ ಹಾಗೂ ವಿದ್ಯಾರ್ಥಿಗಳ ಪೋಷಕರು ಮತ್ತು ಕಾಲೇಜುಗಳ ಶಿಕ್ಷಕರು ಉಪಸ್ಥಿತರಿದ್ದರು.
…..

Latest Indian news

Popular Stories