ಫೆ. 15 ರಂದು ಕ. ರಾ. ಸಮುದಾಯ ಆರೋಗ್ಯ ಅಧಿಕಾರಿಗಳಿಂದ ಅನಿರ್ದಿಷ್ಟ ಮುಷ್ಕರ

ಕಾರವಾರ: ಸಮುದಾಯ ಆರೋಗ್ಯ ಅಧಿಕಾರಿಗಳ ಸೇವೆ ಖಾಯಂ ಮಾಡಲು ಆಗ್ರಹಿಸಿ , ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ. 15 ರಂದು ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಅಧಿಕಾರಿಗಳಿಂದ ಅನಿರ್ದಿಷ್ಟ ಮುಷ್ಕರ ನಡೆಸಲಾಗುತ್ತಿದೆ ಎಂದು ಅಖಿಲ ಭಾರತ ರಾಜ್ಯ ಸಮುದಾಯ ಆರೋಗ್ಯ ಎನ್‌ಎಚ್‌ಎಮ್ ಗುತ್ತಿಗೆ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ರವಿ ನಾಯ್ಕ ಹೇಳಿದರು.

ಅವರು ಇಂದು ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಿದ್ದರು. ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಅಧಿಕಾರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಳಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತದ್ದು 11 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಫೆಬ್ರವರಿ 15 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮುಷ್ಕರ ನಡೆಸುತ್ತಿದ್ದೇವೆ. ರಾಜ್ಯದ 6192 ಸಮುದಾಯ ಆರೋಗ್ಯ ಅಧಿಕಾರಿಗಳು ಈ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಈ ಮುಷ್ಕರದಲ್ಲಿ ಸಮಗ್ರ ಪ್ರಾಥಮಿಕ ಆರೋಗ್ಯ ರಕ್ಷಣೆ – ಯುಎಚ್‌ಸಿ ಮಾರ್ಗಸೂಚಿ ಅನ್ವಯ ಆರು ವರ್ಷ ಸೇವೆ ಪೂರೈಸಿದ ಎಲ್ಲಾ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಸೇವೆಯನ್ನು ಖಾಯಂಗೊಳಿಸಬೇಕು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಇತರೆ ಉದ್ಯೋಗಿಗಳಿಗೆ ನೀಡಿದ ಶೇ 15 ರಷ್ಟು ವೇತನ ಹೆಚ್ಚಳವನ್ನು ಸಮುದಾಯ ಆರೋಗ್ಯ ಅಧಿಕಾರಿಗಳಿಗೂ ಅನ್ವಯಿಸಬೇಕು ಎಂದು ಒತ್ತಾಯಿಸಲಾಗುವುದು ಎಂದರು. ಇದರೊಂದಿಗೆ ತಡೆಹಿಡಿದಿರುವ ಶೇ. 5 ರಷ್ಟು ವಾರ್ಷಿಕ ವೇತನ ಮತ್ತು ಶೇ. 10 ಲಾಯ್ಟಿ ಬೋನಸ್ ಕೂಡಲೇ ಬಿಡುಗಡೆ ಮಾಡಬೇಕು. ವಿನಾಕಾರಣ ವಜಾಗೊಳಿಸಿದ ಎಲ್ಲಾ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಕೂಡಲೇ ನೇಮಕ ಮಾಡಿಕೊಂಡು ಸಿಪಿಹೆಚ್‌ಸಿ-ಯುಎಚ್‌ಸಿ ಮಾರ್ಗ ಸೂಚಿ ಅನ್ವಯ 15000 ರೂ. ಮಾಸಿಕ ಪ್ರೋತ್ಸಾಹಧನ ಪಾವತಿಸಬೇಕು ಎಂದರು.

ಸಮುದಾಯ ಆರೋಗ್ಯ ಅಧಿಕಾರಿಗಳ ನೇಮಕಾತಿಯ ಷರತ್ತು ಹಾಗೂ ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ಕಾರ್ಯನಿರ್ವಹಣೆ ಹಾಗೂ ಎಚ್‌ಡಬ್ಲ್ಯುಸಿ ಆಡಳಿತಕ್ಕೆ ಮಾತ್ರ ಸೀಮಿತಗೊಳಿಸಿ, ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ವರ್ಗಾವಣೆಗೆ ಅವಕಾಶ ಕಲ್ಪಿಸುವಂತ ಕ್ರಮ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಅನಿರ್ದಿಷ್ಟ ಮುಷ್ಕರ ನಡೆಸಲಾಗುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಸಂದೀಪ ಕುಮಾರ, ಪ್ರವೀಣ ಡಯಾಸ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Latest Indian news

Popular Stories