ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಅಘನಾಶಿನಿ ನದಿಗೆ ನೆರೆ: ಅಲ್ಲಲ್ಲಿ ಗಂಜಿ ಕೇಂದ್ರ ಸ್ಥಾಪನೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಶಿರಸಿ,ದಾಂಡೇಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು,
ಗುಂಡಬಾಳ ನದಿ ನೀರಿನ ಹರಿವು ತೀವ್ರವಾಗಿದೆ.

1001355775 Uttara Kannada

ಗುಂಡ ಬಾಳ ನದಿಗೆ ನೆರೆ ಬಂದು ಚಿಕ್ಕನಕೋಡ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಹರಿಜನಕೇರಿ ಮತ್ತು ಹಿತ್ತಲಕೇರಿ ಮಜೇರಿಯ ಮನೆಗಳಿಗೆ ನೀರು ನುಗ್ಗಿದ್ದು , ಈ ಮನೆಯಲ್ಲಿ ವಾಸ್ತವ್ಯ ಇರುವ ಜನರನ್ನು, ಜಿಲ್ಲಾಡಳಿತದ ವತಿಯಿಂದ ತೆರೆಯಲಾದ ಕಾಳಜಿ ಕೇಂದ್ರಕ್ಕೆ ಕರೆತಂದು ಅಗತ್ಯ ವ್ಯವಸ್ಥೆಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

1001355752 Uttara Kannada


ಗುಂಡಬಾಳ ನದಿಯ ನೆರೆ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು ಈ ಭಾಗದ ಜನತಾ ವಿದ್ಯಾಲಯ ಅನಿಲಗೋಡ್ ,ಹಿರಿಯ ಪ್ರಾಥಮಿಕ ಶಾಲೆ ಅನಿಲಗೋಡ,ಗುಂಡ ಬಾಳ ನಂ-2,ಗುಂಡಿ ಬೈಲ್ ನಂ 2, ಹುಡ್ಗೋಡ ಇಟ್ಟಿಹಾದ ಪಬ್ಲಿಕ್ ಸ್ಕೂಲ್ ವಲ್ಕಿ, ಕಿರಿಯ ಪ್ರಾಥಮಿಕ ಶಾಲೆ ಗಂಜಿಗೆರೆ ಈ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ನದಿ ನೀರು ಸಹಜ ಮಟ್ಟಕ್ಕಿಂತ ಮೇಲೆ ಬರುತ್ತಿದ್ದು ನದಿ ಪಾತ್ರದ ಮನೆಗಳಿಗೆ ನೀರು ನುಗ್ಗುವ ಸಾಧ್ಯತೆ ಇದೆ. ಕಾರಣ ಐಗಳಕುರ್ವೆ ಗ್ರಾಮದ ಸಾರ್ವಜನಿಕರಿಗೆ ಕಾಳಜಿ ಕೇಂದ್ರಕ್ಕೆ ಬರುವಂತೆ ಗ್ರಾಮಸ್ಥರಿಗೆ ತಿಳಿಸಲಾಗಿದೆ.

ಶಿರಸಿ ಕುಮಟಾ ಹೆದ್ದಾರಿಯಲ್ಲಿ ರಸ್ತೆಗೆ ಬಂದ ಮಳೆ ನೀರು ತುಂಬಿ ಹರಿಯುತ್ತಿರುವ ಅಘನಾಶಿನಿ ನದಿಗೆ ನೆರೆ ಬಂದಿದೆ.

ಕತಗಾಲ ಗ್ರಾಮದ ಬಳಿ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು ಕಾರಣ ರಸ್ತೆ ಸಂಚಾರ ಬಂದ್ ಆಗಿದೆ.
ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಮತ್ತಯ ಮಲೆನಾಡು ಸಂಪರ್ಕದ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ.
ಕಳೆದ ಮೂರು ನಾಲ್ಕು ತಾಸುಗಳಿಂದ ವಾಹನ ಸಂಚಾರ ಸ್ಥಗಿತವಾಗಿದೆ. ಬಸ್ ನಲ್ಲಿ ಸಂಚರಿಸುವ ಪ್ರಯಾಣಿಕರು ಪರದಾಡುವಂತಾಗಿದೆ.

Latest Indian news

Popular Stories