ಕೊಚ್ಚಿಯಲ್ಲಿ ಜ್ವರವಿರುವ ಶೇ.30ರಷ್ಟು ಜನರಲ್ಲಿ ಕೋವಿಡ್ ಸೋಂಕು ದೃಢ

ನವದೆಹಲಿ:,’ಕೇರಳದ ಕೊಚ್ಚಿಯಲ್ಲಿ ಇನ್ ಫ್ಲುಯೆಂಜಾ ಲಕ್ಷಣಗಳಿರುವವರನ್ನು ಪರೀಕ್ಷೆಗೊಳಪಡಿಸಿದಾಗ ಶೇ.30ರಷ್ಟು ಮಂದಿಗೆ ಪಾಸಿಟಿವ್ ಬಂದಿದೆ.

ಇದು ಮತ್ತೊಮ್ಮೆ ಕೋವಿಡ್ ಜನಸಮುದಾಯಕ್ಕೆ ಹರಡಿರುವುದರ ಲಕ್ಷಣ. ನನ್ನ ಪಕ್ಕದ ಮನೆಯವರಿಗೂ ಕೋವಿಡ್‌ ಬಂದಿದೆ. ಎಲ್ಲೆಡೆ ಪಾಸಿಟಿವ್ ಬರುತ್ತಿದೆ. ಕಳೆದೊಂದು ತಿಂಗಳಿನಿಂದ ಈ ವೈರಸ್ ಹರಡುತ್ತಿದೆ. ಆದರೆ ಕೋವಿಡ್ ಪರೀಕ್ಷೆ ಬಹಳ ಕಡಿಮೆ ನಡೆಯುತ್ತಿತ್ತು. ಕೆಲವೆಡೆ ಪರೀಕ್ಷೆಯೇ ನಡೆಯುತ್ತಿರಲಿಲ್ಲ. ನವೆಂಬರ್‌ಗಿಂತ ಮೊದಲು ಇನ್‌ಫ್ಲುಯೆಂಜಾ ಲಕ್ಷಣವಿರುವವರಲ್ಲಿ ಶೇ.1ರಷ್ಟು ಮಂದಿಗೆ ಪಾಸಿಟಿವ್ ಬರುತ್ತಿತ್ತು. ನವೆಂಬರ್ ನಂತರ ಅದು ಶೇ.9ಕ್ಕೆ ಏರಿತು. ಈಗ ಪಾಸಿಟಿವಿಟಿ ದರ ಕೆಲವೆಡೆ ಶೇ.30ಕ್ಕೆ ಏರಿಕೆಯಾಗಿದೆ. ಇದರರ್ಥ ಶ್ವಾಸಕೋಶದ ತೊಂದರೆ, ಕೆಮ್ಮು, ಜ್ವರ ಮತ್ತು ಮೈಕೈ ನೋವಿನ ಬಹುತೇಕ ಪ್ರಕರಣಗಳು ಕೋವಿಡ್ ಆಗಿವೆ’ಎಂದು ಡಾ.ಜಯದೇವನ್ ತಿಳಿಸಿದ್ದಾರೆ.

ಡಾ.ಸೌಮ್ಯಾ ಸ್ವಾಮಿನಾಥನ್ ಮಾತನಾಡಿ, ‘ಈಗ ಹರಡುತ್ತಿರುವ ಕೋವಿಡ್ ಕೇವಲ ಸಾಮಾನ್ಯ ನೆಗಡಿ ಎಂದು ನಿರ್ಲಕ್ಷಿಸಬಾರದು. ಕೋವಿಡ್ ನಿಂದ ದೀರ್ಘಾವಧಿಯಲ್ಲಿ ಉಂಟಾಗಬಹುದಾದ ಹೃದಯಾಘಾತ, ಪಾರ್ಶ್ವವಾಯು ಹಾಗೂ ಮಾನಸಿಕ ಸಮಸ್ಯೆಗಳನ್ನೂ ಗಣನೆಗೆ ತೆಗೆದುಕೊಳ್ಳಬೇಕು. ಜೆಎನ್. ತಳಿ ತೀವ್ರ ಪ್ರಮಾಣದಲ್ಲಿ ಹರಡುತ್ತಿದ್ದರೂ ಇದರಿಂದ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಹೆಚ್ಚಾಗದೆ ಇರಬಹುದು. ಅದಕ್ಕೆ ಎರಡು ಡೋಸ್ ಲಸಿಕೆ ನೀಡಿರುವುದು ಕೂಡ ಒಂದು ಕಾರಣ. ಮೊದಲ ಮೂರು ಅಲೆಗಳಲ್ಲಿ ನಮ್ಮ ದೇಶ ವೈದ್ಯಕೀಯವಾಗಿ ಸಾಕಷ್ಟು ಮುಂದುವರೆದಿದೆ. ಹಾಗಾಗಿ ಇದಕ್ಕೆ ಚಿಕಿತ್ಸೆ ನೀಡುವುದು ಕಷ್ಟವಿಲ್ಲ, ಆದರೆ ರೋಗಿಗಳ ಹಾಗೂ ವೃದ್ಧರು ಮಾಸ್ಕ್ ಧರಿಸಬೇಕುಎಂದು ಹೇಳಿದ್ದಾರೆ.

Latest Indian news

Popular Stories