
Uttara Kannada
ವಾರಾಂತ್ಯದಲ್ಲಿ ಉತ್ತರ ಭಾರತವನ್ನು ಆವರಿಸಲಿರುವ ದಟ್ಟ ಮಂಜು: ಹವಾಮಾನ ಇಲಾಖೆ ಎಚ್ಚರಿಕೆ
ಮುಂದಿನ ಎರಡು ದಿನಗಳಲ್ಲಿ ಉತ್ತರ ಭಾರತವನ್ನು ದಟ್ಟ ಮಂಜು ಆವರಿಸಲಿದ್ದು, ಪೂರ್ವ ಭಾರತಕ್ಕೂ ಈ ವಾತಾವರಣ ವಿಸ್ತರಿಸಲಿದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ.
ಶನಿವಾರ ಮತ್ತು ಭಾನುವಾರದಂದು ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಉತ್ತರ ರಾಜಸ್ಥಾನದ ಕೆಲವು ಭಾಗಗಳಲ್ಲಿ ಶೀತ ದಿನಗಳು ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಮುನ್ಸೂಚನೆ ಸಂಸ್ಥೆ ತಿಳಿಸಿದೆ.
ಈ ವಾತಾವರಣ ಜ.1 ವರೆಗೂ ಹರ್ಯಾಣ, ಚಂಡೀಗಢ, ದೆಹಲಿ, ಪೂರ್ವ ಉತ್ತರ ಪ್ರದೇಶಗಳಲ್ಲಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರಾಖಂಡ್, ಮಧ್ಯಪ್ರದೇಶ, ಉತ್ತರ ರಾಜಸ್ಥಾನ, ಜಾರ್ಖಂಡ್ ಗಳಲ್ಲಿ ಜ.04 ವರೆಗೆ ಬೆಳಗಿನ ಗೋಚರತೆ 50-200 ಮೀ ವರೆಗೆ ಇರಲಿದೆ ಎಂದು ತಿಳಿದುಬಂದಿದೆ. ಭಾನುವಾರ ಮತ್ತು ಜನವರಿ 2 ರಂದು ಗಂಗಾನದಿ ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ, ಅಸ್ಸಾಂ, ಮೇಘಾಲಯ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಇದೇ ರೀತಿಯ ಪರಿಸ್ಥಿತಿ ಇರಲಿದೆ.




