370ನೇ ವಿಧಿ’ ರದ್ದತಿ, ಕೇಂದ್ರ ಸರ್ಕಾರದ ತೀರ್ಮಾನ ಎತ್ತಿ ಹಿಡಿದ ‘ಸುಪ್ರಿಂಕೋರ್ಟ್‌’

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ತೀರ್ಪು ಹೊರ ಬಿದಿದ್ದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠ ಈ ತೀರ್ಪು ನೀಡಿದೆ.

ಹಿಂದಿನ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ 370 ನೇ ವಿಧಿ ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ, 2019 ಅನ್ನು ರದ್ದುಪಡಿಸುವುದನ್ನು ಪ್ರಶ್ನಿಸಿ ಹಲವಾರು ಅರ್ಜಿಗಳನ್ನು 2019 ರಲ್ಲಿ ಸಂವಿಧಾನ ಪೀಠಕ್ಕೆ ಉಲ್ಲೇಖಿಸಲಾಗಿತ್ತು.

ಸಿಜೆಐ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್, ಸಂಜೀವ್ ಖನ್ನಾ, ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಪೀಠವು 16 ದಿನಗಳಿಂದ ಅರ್ಜಿದಾರರು ಮತ್ತು ಕೇಂದ್ರದ ವಾದಗಳನ್ನು ಆಲಿಸುತ್ತಿತ್ತು.

Latest Indian news

Popular Stories