ಬಡವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ : ಮುಂದಿನ ವರ್ಷ ದೇಶದಲ್ಲಿ 3 ಕೋಟಿ ಮನೆ ನಿರ್ಮಾಣ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 6 ನೇ ಬಾರಿಗೆ ಮಧ್ಯಂತರ ಬಜೆಟ್ 2024 ಮಂಡಿಸುತ್ತಿದ್ದಾರೆ. ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕೇಂದ್ರ ಸರ್ಕಾರ ಜನಪ್ರಿಯ ಬಜೆಟ್ ಮಂಡಿಸುತ್ತಿದ್ದು, ದೇಶದ ಜನರಲ್ಲಿ ಬಜೆಟ್ ಬಗ್ಗೆ ಬಹಳ ನಿರೀಕ್ಷೆಯಿದೆ.

ಬಡವರಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಮುಂದಿನ ವರ್ಷ ದೇಶದಲ್ಲಿ 3 ಕೋಟಿ ಮನೆ ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ. ನಾವು ಗರೀಬ್, ಮಹಿಲಾಯೆನ್, ಯುವ ಮತ್ತು ಅನ್ನದಾತನ ಬಗ್ಗೆ ಗಮನ ಹರಿಸಬೇಕಾಗಿದೆ; ಅವರ ಅಗತ್ಯತೆಗಳು ಮತ್ತು ಆಕಾಂಕ್ಷೆಗಳು ನಮ್ಮ ಅತ್ಯುನ್ನತ ಆದ್ಯತೆಗಳಾಗಿವೆ.

ಮುಂದಿನ ಐದು ವರ್ಷಗಳಲ್ಲಿ 2 ಕೋಟಿ ಬಡವರಿಗೆ ಮನೆ ನಿರ್ಮಿಸಿಕೊಡುತ್ತೇವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.ಸರ್ಕಾರದ ಗಮನವು ಜಿಡಿಪಿ ಮೇಲೆ ಇದೆ ಎಂದು ಹಣಕಾಸು ಸಚಿವೆ ಸೀತಾರಾಮನ್ ಹೇಳಿದರು. ಸರ್ಕಾರವು ಆಡಳಿತ, ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ಮೇಲೆ ಸಮಾನವಾಗಿ ಗಮನಹರಿಸುತ್ತಿದೆ ಎಂದಿದ್ದಾರೆ.

Latest Indian news

Popular Stories