ಕಾರವಾರ : ಸೆಪ್ಟಂಬರ್ ೧೫ ರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ, ಜಿಲ್ಲೆಯಲ್ಲಿ ರಚಿಸಲಾಗುವ ಮಾನವ ಸರಪಳಿಯಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ರಾಜ್ಯ ಸರ್ಕಾರದಿಂದ ಪ್ರಶಂಸನಾ ಪತ್ರವನ್ನು ಪಡೆಯಬಹುದಾಗಿದೆ ಎಂದು
ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸುವವರ ಛಾಯಾಚಿತ್ರವನ್ನು ಪ್ರಮಾಣಪತ್ರದಲ್ಲಿ ಮುದ್ರಿಸಲು ಅವಕಾಶ ನೀಡಲಾಗಿದೆ.ಒಂದು ಫೋಟೋ ಫ್ರೇಮ್‌ನಲ್ಲಿ, ೫ ಸದಸ್ಯರವರೆಗೆ ಅವಕಾಶವಿದ್ದು, ಕುಟುಂಬಗಳು ಒಟ್ಟಿಗೆ ನಿಲ್ಲಲು, ಚಿತ್ರವನ್ನು ತೆಗೆದುಕೊಳ್ಳಲು, ಅದನ್ನು ಅಪ್‌ಲೋಡ್ ಮಾಡಲು ಮತ್ತು ಪ್ರಮಾಣಪತ್ರದಲ್ಲಿ ಮುದ್ರಿಸಲು ಅವಕಾಶವನ್ನು ಒದಗಿಸಲಾಗಿದೆ.
ಜಿಲ್ಲೆಯ ಸಾರ್ವಜನಿಕರು, ಸಂಘ ಸಂಸ್ಥೆಗಳು,ಪ್ರವಾಸಿಗರು ಮಾನವ ಸರಪಳಿಯಲ್ಲಿ ಭಾಗವಹಿಸುವ ಕುರಿತಂತೆ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹೆಸರನ್ನು Democracydaykarnataka.in ನಲ್ಲಿ ನೊಂದಾಯಿಸಿಕೊಂಡು ಪ್ರಮಾಣಪತ್ರವನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
…….