Featured StoryUttara Kannada

ಕಾರವಾರ : 1,92,850 ಎನ್ಯುಮರೇಷನ್ ಫಾರ್ಮ್ ಗಣಕೀಕರಣ

ಕಾರವಾರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,23,390 ಮತದಾರರಿದ್ದು, ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ -2026 ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಲಾಗಿದ್ದು, ಇದುವರೆಗೆ 1,92,850 ಫಾರ್ಮ್ ಗಳನ್ನು ಗಣಕೀಕರಣ ಗೊಳಿಸಲಾಗಿದೆ ಎಂದು ಕಾರವಾರ ವಿಧಾನಸಭಾ ಕ್ಷೇತ್ರದ ಮತದಾರರ ನೊಂದಣಾಧಿಕಾರಿ ಹಾಗೂ ಸಹಾಯಕ ಆಯುಕ್ತರು ತಿಳಿಸಿದ್ದಾರೆ

ಕಾರವಾರ: ಕಾರವಾರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,23,390 ಮತದಾರರಿದ್ದು, ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ -2026 ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಲಾಗಿದ್ದು, ಇದುವರೆಗೆ 1,92,850 ಫಾರ್ಮ್ ಗಳನ್ನು ಗಣಕೀಕರಣ ಗೊಳಿಸಲಾಗಿದೆ ಎಂದು ಕಾರವಾರ ವಿಧಾನಸಭಾ ಕ್ಷೇತ್ರದ ಮತದಾರರ ನೊಂದಣಾಧಿಕಾರಿ ಹಾಗೂ ಸಹಾಯಕ ಆಯುಕ್ತರು ತಿಳಿಸಿದ್ದಾರೆ.

ಕ್ಷೇತ್ರದಲ್ಲಿ ಈವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬಂಧಿಸಿದ ಒಟ್ಟು 16563 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 5533 ಶಾಶ್ವತ ವಲಸೆ ಹಾಗೂ 7639ಮರಣ ಹೊಂದಿದ ಪ್ರಕರಣಗಳು ಹಾಗೂ 2750 ದ್ವಿಪ್ರತಿಗಳು ಸೇರಿವೆ ಎಂದು ತಿಳಿಸಿದ್ದಾರೆ.

ಕುಮಟಾ : 1,76,734 ಫಾರ್ಮ್ ಗಣಕೀಕರಣ :

ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1,92,055 ಮತದಾರರಿದ್ದು, ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ -2026 ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಲಾಗಿದ್ದು, ಇದುವರೆಗೆ 1,76,734 ಫಾರ್ಮ್ ಗಳನ್ನು ಗಣಕೀಕರಣ ಗೊಳಿಸಲಾಗಿದೆ ಎಂದು ಕುಮಟಾ ವಿಧಾನಸಭಾ ಕ್ಷೇತ್ರದ ಮತದಾರರ ನೊಂದಣಾಧಿಕಾರಿ ಹಾಗೂ ಸಹಾಯಕ ಆಯುಕ್ತರು ತಿಳಿಸಿದ್ದಾರೆ.

ಕ್ಷೇತ್ರದಲ್ಲಿ ಈವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬ0ಧಿಸಿದ0ತೆ ಒಟ್ಟು 14,804 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 5993 ಶಾಶ್ವತ ವಲಸೆ ಹಾಗೂ 7180 ಮರಣ ಹೊಂದಿದ ಪ್ರಕರಣಗಳು ಹಾಗೂ 1021 ದ್ವಿಪ್ರತಿಗಳು ಸೇರಿವೆ ಎಂದು ತಿಳಿಸಿದ್ದಾರೆ.

Back to top button