ಕಾರವಾರ : ಹಣ ಪಡೆಯುತ್ತಿದ್ದಾಗ ಹೊನ್ನಾವರ ಪಂಚಾಯತಿ ಮುಖ್ಯ ಇಂಜನಿಯರ್ ಲೋಕಾ ಬಲೆಗೆ ಬಿದ್ದಿದ್ದಾರೆ.
ಏಜೆಂಟ್ ಒಬ್ಬರ ಮೂಲಕ ಅರವತ್ತು ಸಾವಿರ ಲಂಚ ಪಡೆಯುತ್ತಿದ್ದಾಗ ಇಂಜಿನಿಯರ ಪ್ರವೀಣ್ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ಹೊನ್ನಾವರ ಪಟ್ಟಣ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಇಂಜಿನಿಯರ ಪ್ರವೀಣ್ ಕುಮಾರ ವ್ಯಕ್ತಿಯೋರ್ವರೊಗೆ ಕೆಲಸ ಮಾಡಿಸಿಕೊಡುವುದಾಗಿ ಹೇಳಿ ಹಣ ಪಡೆಯುತ್ತಿದ್ದ ವೇಳೆ
ಲೋಕಾಯುಕ್ತ ಎಸ್ ಪಿ ಕುಮಾರ ಚಂದ ನೇತೃತ್ವದಲ್ಲಿ ದಾಳಿ ನಡೆದಿದೆ.
ಹೊನ್ನಾವರ ಪಟ್ಟಣ ಪಂಚಾಯತಿ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ.
ಕಾರವಾರ ಲೋಕಾಯುಕ್ತ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.