ಜಿಲ್ಲಾಧಿಕಾರಿಯಾಗಿ ಲಕ್ಷ್ಮಿ ಪ್ರಿಯಾ.ಕೆ ಅಧಿಕಾರ ಸ್ವೀಕಾರ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿ ಪ್ರಿಯಾ. ಕೆ. ಶನಿವಾರ ಅಧಿಕಾರ ಸ್ವೀಕರಿಸಿದರು.

2015 ರ ಬ್ಯಾಚ್‌ನ ಐ.ಎ.ಎಸ್.‌
ಅಧಿಕಾರಿಯಾಗಿರುವ ಇವರು, ಕುಮಟಾದಲ್ಲಿ ಹಿಂದೆ ಉಪ ವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ, ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಭೂ ಕುಸಿತ ಸಂದರ್ಭದಲ್ಲಿ ಕಾರ್ಯ ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದರು.

ನಂತರ ಮೈಸೂರಿನ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದು, ಮೂಲತ: ತಮಿಳುನಾಡು ರಾಜ್ಯವದವರು. ವರ್ಗಾವಣೆಯಾದ ಕೆಲ ಘಂಟೆಗಳಲ್ಲಿ ಕಾರವಾರಕ್ಕೆ ಆಗಮಿಸಿ ಜಿಲ್ಲಾಧಿಕಾರಿ ಹುದ್ದೆಯ ಅಧಿಕಾರ ಸ್ವೀಕರಿಸಿದರು.
……

Latest Indian news

Popular Stories