ಕಾರವಾರ:ಕುಷ್ಠರೋಗದ ಲಕ್ಷಣಗಳು ಕಂಡು ಬಂದಲ್ಲಿ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ಪಡೆದಲ್ಲಿ ಕುಷ್ಠರೋಗ ನಿಯಂತ್ರಿಸಿಲು ಸಾಧ್ಯವಿದೆ ಎಂದು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಅನ್ನಪೂರ್ಣ ವಸ್ತ್ರದ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕ್ರಿಮ್ಸ ಕಾರವಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ರೆಡ್ ಕ್ರಾಸ್ ಘಟಕ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಕುಷ್ಠರೋಗ ವಿರೋಧಿ ದಿನದ ಅಂಗವಾಗಿ ಬಾಡದ ಶಿವಾಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಉದ್ಘಾಟಿಸಿ ಮಾತನಾಡಿದರು.
ಜನರಲ್ಲಿ ಕುಷ್ಠರೋಗದ ಬಗ್ಗೆ ಕಳಂಕ ತಾರತಮ್ಯದಿಂದಾಗಿ ರೋಗಲಕ್ಷಣದ ಬಗ್ಗೆ ತಿಳಿಸಲು ಹಿಂಜರಿಯುತ್ತಿದ್ದಾರೆ. ಇದರಿಂದ ಶಾಶ್ವತ ಅಂಗವಿಕತೆ ಉಂಟಾಗಬಹುದು ಹಾಗಾಗಿ ಜನರಲ್ಲಿ ಕುಷ್ಠರೋಗದ ಕುರಿತು ಅರಿವು ಮುಡಿಸಬೇಕು ಎಂದರು.
ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ ಶಂಕರ ರಾವ್, ಮಾತನಾಡಿ ಕಳಂಕವನ್ನು ಕೊನೆಗೊಳಿಸಿ ಘನತೆಯನ್ನು ಎತ್ತಿ ಹಿಡಿಯಿರಿ ಎಂಬ ಘೋಷವಾಕ್ಯದೊಂದಿಗೆ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನವು ದೇಶಾದ್ಯಂತ ಫೆ.13 ರವರೆಗೆ ನಡೆಯಲಿದ್ದು, ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.
ಕುಷ್ಠರೋಗವು ಮೈಕೋಬ್ಯಾಕ್ಟೀರಿಯಂ ಲೆಪ್ರೆ ಎಂಬ ರೋಗಾಣುವಿನಿಂದ ಬರುತ್ತದೆ. ದೇಹದ ಮೇಲೆ ಯಾವುದೇ ಸ್ಪರ್ಶ ಜ್ಞಾನವಿಲ್ಲದ ತಿಳಿಬಿಳಿ ಅಥವಾ ತಾಮ್ರ ಬಣ್ಣದ ಮಚ್ಚೆಗಳು ಕಾಣಿಸುವುದು, ಕೈಕಾಲುಗಳಲ್ಲಿ ಜೋಮು ಹಿಡಿದ ಸ್ಪರ್ಶ ಜ್ಞಾನವಿಲ್ಲದಿರುವುದು, ಮುಖ ಅಥವಾ ಕೈ ಕಾಲುಗಳಲ್ಲಿ ಎಣ್ಣೆ ಸವರಿದಂತೆ ಹೊಳಪು, ಗಂಟುಗಳು, ಕಣ್ಣಿನ ರೆಪ್ಪೆಗಳನ್ನು ಮುಚ್ಚಲು ಅಸಮರ್ಥತೆ, ಕೈ ಅಥವಾ ಕಾಲುಗಳ ಬೆರಳುಗಳು ಮಡಚಿಕೊಂಡಿರುವುದು, ನಡೆಯುವಾಗ ಕಾಲು ಎಳೆಯುವುದು, ಅಂಗೈ ಅಥವಾ ಪಾದಗಳಲ್ಲಿ ಶೀತ, ಬಿಸಿ ಸಂವೇದನೆ ನಷ್ಟವಾಗಿರುವುದು, ವಸ್ತುಗಲನ್ನು ಹಿಡಿಯಲು ಅಥವಾ ಪಾದರಕ್ಷೆ ತೊಡುವಲ್ಲಿ ಬಲಹೀನತೆ ಲಕ್ಷಣಗಳು ಕಂಡು ಬಂದಲ್ಲಿ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಮಾತನಾಡಿದ ವೈದ್ಯೆ ಶೃತಿ ಕುಷ್ಠರೋಗಕ್ಕೆ ಅಂಟಿಕೊಂಡಿರುವ ಕಳಂಕ ಹಾಗೂ ತಾರತಮ್ಯವನ್ನು ಹೋಗಲಾಡಿಸಿ, ರೋಗದಿಂದ ಭಾದಿತರಾವದವನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಗೌರಯುತವಾಗಿ ಬದುಕಲು ಅವಕಾಶ ನೀಡಲು ಎಲ್ಲರ ಸಹಕಾರ ಅಗತ್ಯ ಎಂದರು.
….