ಪ್ರತಿ ವರ್ಷ ವಿಜೃಂಭಣೆಯಿಂದ ಈ ಕಾರ್ಯಕ್ರಮ | ಮಹಾಶಿವರಾತ್ರಿ ಜಾಗರಣೆ ಉತ್ಸವ ಉದ್ಘಾಟಿಸಿದ ಸಚಿವ ಮಂಕಾಳು ವೈದ್ಯ

ಕಾರವಾರ : ಪ್ರಪ್ರಥಮ ಬಾರಿಗೆ ಮುರ್ಡೇಶ್ವರದಲ್ಲಿ ಮಹಾ ಶಿವರಾತ್ರಿ ಜಾಗರಣೆ ಉತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಂದಿನ‌ ದಿನಗಳಲ್ಲಿ ಜಾಗರಣೆ ಉತ್ಸವವನ್ನು ವಿಜೃಂಭಣೆಯಿಂದ ಮುಂದುವರೆಸಿಕೊಂಡು ಹೋಗಲಾಗುವುದು ಅದಕ್ಕೆ ಬೇಕಾದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ‌‌‌ ಎಸ್ ವೈದ್ಯ ಹೇಳಿದರು.
ಅವರು ಇಂದು ರಾತ್ರಿ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಇದೇ ಪ್ರಥಮ ಬಾರಿಗೆ ಜಿಲ್ಲಾಡಳಿತ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಮೂಲಕ ಮಹಾಶಿವರಾತ್ರಿ ಜಾಗರಣೆ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬರೂ ದೇವರನ್ನು ನಂಬಿ ಕೆಲಸ ಮಾಡಬೇಕು, ದೇವರಲ್ಲಿ ವಿಶ್ವಾಸ ಇಡಬೇಕು. ಮುರುಡೇಶ್ವರದ ಊರಿನವರ ಸಹಕಾರ ದಿಂದ ಇದೇ ಮೊದಲ ಬಾರಿಗೆ ಶಿವರಾತ್ರಿ ಜಾಗರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಇನ್ನು ಮುಂದೆ ಪ್ರತಿ ವರ್ಷ ವಿಜೃಂಭಣೆಯಿಂದ ಈ ಕಾರ್ಯಕ್ರಮ ನಡೆಸಲು ಪ್ರಯತ್ನಿಸಲಾಗುವುದು . ಹಾಗೂ ಮುರುಡೇಶ್ವರದ ಸಮಗ್ರ ಅಭಿವೃದ್ಧಿ ಗೆ ಸಕಲ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.

ಈ ಭಾಗದ ಜನರ ಆಶಿರ್ವಾದದಿಂದ ಜನರ ಕೆಲಸ‌ ಮಾಡಲು ಅವಕಾಶ ಸಿಕ್ಕಿದ್ದು, ದೇವರ ಆಶಿರ್ವಾದದಿಂದ ಜಿಲ್ಲೆಯಲ್ಲಿ ಇನ್ನೂ ಹೆಚ್ವಿನ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಆಶೀರ್ವಾದ ಬೇಡುತ್ತೇನೆ ಎಂದರು.

ಮುರುಡೇಶ್ವರ ದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಿದ್ದ ಈ ಶಿವರಾತ್ರಿ ಜಾಗರಣೆ ಕಾರ್ಯಕ್ರಮ ನಿರಂತರವಾಗಿ ಮುಂದುವರೆಸಲು ನಿರ್ಧರಿಸಿದೆ. ಮುರುಡೇಶ್ವರದಲ್ಲಿ ಹೆಚ್ಚಿನ ಪ್ರವಾಸೋಧ್ಯಮ ಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ಇನ್ನು ಹೆಚ್ಚು ಪ್ರವಾಸಿಗರನ್ನು ಆಕರ್ಷಿಸಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.

ಜಿ.ಪಂ. ಸಿಇಒ ಈಶ್ವರ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್, ಭಟ್ಕಳ ಉಪ ವಿಭಾಗಾಧಿಕಾರಿ ಡಾ.ನಯನಾ, ಭಟ್ಕಳ ತಹಸೀಲ್ದಾರ್ ತಿಪ್ಪೇಸ್ವಾಮಿ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಜಯಂತ್, ಮಾವಳ್ಳಿ ಗ್ರಾ.ಪಂ. ಆಧ್ಯಕ್ಷೆ ನಾಗರತ್ನ ಕೊಗ್ಗ , ಮುರುಡೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಜಯರಾಮ ಅಡಿಗ, ಮುರ್ಡೇಶ್ವರದ ಗ್ರಾಮೀಣ ಪ್ರತಿಷ್ಠಾನದ ಅಧ್ಯಕ್ಷ ಎಸ್. ಎಸ್. ಕಾಮತ್ ಮತ್ತಿತರರು ಉಪಸ್ಥಿತರಿದ್ದರು.
….

Latest Indian news

Popular Stories