ನವದೆಹಲಿ : ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಆರೋಪಿ ನೀಲಂ ಆಜಾದ್ ಅವರ ಜಾಮೀನು ಅರ್ಜಿಯನ್ನು ಇಲ್ಲಿನ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ. ಈ ಹಂತದಲ್ಲಿ ಜಾಮೀನು ನೀಡುವುದು ಸರಿಯಲ್ಲ ಎಂದು ಹೇಳಿದೆ.
ಭದ್ರತಾ ಉಲ್ಲಂಘನೆ ಪ್ರಕರಣದಲ್ಲಿ ತನ್ನ ಬಂಧನವನ್ನು ಪ್ರಶ್ನಿಸಿ ಆಜಾದ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ದೀಪ್ ಕೌರ್ ತಿರಸ್ಕರಿಸಿದ್ದಾರೆ.
ಆಜಾದ್ ಮತ್ತು ಇತರ ಆರೋಪಿಗಳು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆಆಜಾದ್ ಮತ್ತು ಇತರ ಆರೋಪಿಗಳಾದ ಮನೋರಂಜನ್ ಡಿ, ಸಾಗರ್ ಶರ್ಮಾ, ಲಲಿತ್ ಝಾ, ಅಮೋಲ್ ಶಿಂಧೆ ಮತ್ತು ಮಹೇಶ್ ಕುಮಾವತ್ ಅವರನ್ನು ಶನಿವಾರ ಜನವರಿ 27 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.