ಗೌರೀಶ್ ಹೆಗಡೆಗೆ ಪಿಡಿಓ ಆಫ್ ದಿ ಮಂತ್ ಪ್ರಶಸ್ತಿ

ಕಾರವಾರ :  ಪಿಡಿಓ ಆಫ್ ದಿ ಮಂತ್ ಪ್ರಶಸ್ತಿಗೆ  ಸಿದ್ದಾಪುರ ತಾಲ್ಲೂಕಿನ ಶಿರಳಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರೀಶ್ ಹೆಗಡೆ ಆಯ್ಕೆಯಾಗಿದ್ದು,‌  ಜಿಲ್ಲಾ ಪಂಚಾಯತಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ ಕಾಂದೂ ಸೋಮವಾರ  ಪ್ರಶಸ್ತಿ ಪತ್ರ ನೀಡಿ, ಅಭಿನಂದಿಸಿದರು.

ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಪ್ರತಿ ಮಾಹೆ ಜಿಲ್ಲಾ ಮಟ್ಟದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಅತ್ಯುತ್ತಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬರನ್ನು ಗುರುತಿಸಿ ನೀಡಲಾಗುತ್ತಿದ್ದು ಎಪ್ರಿಲ್ ೨೦೨೪ ರಲ್ಲಿ ಗೌರೀಶ ಆಯ್ಕೆಯಾಗಿದ್ದರು.
ಗ್ರಾಮೀಣ ಪ್ರದೇಶದ ಜನರ ಸಂಕಷ್ಟಗಳಿಗೆ ಸ್ಪಂದನೆ, ಸರ್ಕಾರದ ಯೋಜನೆಗಳನ್ನು ಸಮರ್ಪಕ ಅನುಷ್ಠಾನ, ದಕ್ಷತೆ ಹಾಗೂ ವಿವಿಧ ಯೋಜನೆಗಳ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಸಾಧಿಸಿದ ಪ್ರಗತಿ ಹಾಗೂ ಸಾರ್ವಜನಿಕರಿಗೆ ಸಲ್ಲಿಸಿದ ಉತ್ತಮ ಸೇವೆಯನ್ನು ಗುರುತಿಸಿ ಅವರಿಗೆ ಈ ಪ್ರಶಸ್ತಿ ನೀಡಿ, ಅಭಿನಂದಿಸಲಾಗಿದೆ. ಅವರ ಹಾಗೆ ಎಲ್ಲ ಗ್ರಾಮ ಪಂಚಾಯತ್ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಈಶ್ವರ್ ಕುಮಾರ ಕಾಂದೂ ಹೇಳಿದರು.
ಪ್ರಶಸ್ತಿ ಪಡೆದು ಮಾತನಾಡಿದ ಗೌರೀಶ್ ಹೆಗಡೆ, ಹಳ್ಳಿಗಾಡಿನಲ್ಲಿ ಜನರ ಏಳಿಗೆಗಾಗಿ ಪ್ರಾಮಾಣಿಕವಾಗಿ ಉತ್ತಮ ಸೇವೆ ನೀಡುತ್ತಿದ್ದೇನೆ. ಇದಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಮನ್ನಣೆ ಸಿಗುತ್ತಿರುವುದು ಖಷಿ ತಂದಿದೆ ಎಂದರು.
ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಕನಿಷ್ಕ್, ಜಿಲ್ಲಾ ಪಂಚಾಯತ್ ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ್, ಮುಖ್ಯ ಯೋಜನಾಧಿಕಾರಿ ವಿನೋದ ಅಣ್ವೇಕರ್ ಉಪಸ್ಥಿತರಿದ್ದರು.
………

Latest Indian news

Popular Stories