
Uttara Kannada
ಮತದಾನ ಪ್ರಯುಕ್ತ ನಿಷೇದಾಜ್ಞೆ
ಕಾರವಾರ : ನ.23 ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಉಪಚುನಾವಣೆ ಜರುಗುವ ಗ್ರಾಮಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವಾರ್ಡುಗಳ ವ್ಯಾಪ್ತಿಯಲ್ಲಿ ಮತದಾನವನ್ನು ಶಾಂತಿಯುತವಾಗಿ ನಡೆಸುವ ಹಿನ್ನಲೆಯಲ್ಲಿ ಕಾರವಾರ, ಕುಮಟಾ, ಹೊನ್ನಾವರ, ಭಟ್ಕಳ ಶಿರಸಿ, ಸಿದ್ದಾಪುರ ಹಾಗೂ ದಾಂಡೇಲಿ ತಾಲೂಕಿನಲ್ಲಿರುವ ಮತದಾನ ನಡೆಯುವ ಮತಗಟ್ಟೆ ವ್ಯಾಪ್ತಿಯಲ್ಲಿ ಮತ್ತು ನಗರ ಸ್ಥಳೀಯ ಸಂಸ್ಥೆ ಯಲ್ಲಾಪುರ ಪಟ್ಟಣ ಪಂಚಾಯತ ಮತ್ತು ಅಂಕೋಲಾ ಪುರಸಭೆ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾನ ನಡೆಯುವ ಮತಗಟ್ಟೆಗಳ ಸುತ್ತಲೂ 100 ಮೀಟರ್ ವ್ಯಾಪ್ತಿಯಲ್ಲಿ ಮತದಾನ ಮುಕ್ತಯವಾಗುವವರೆಗೆ ಭಾರತೀಯ ನಾಗರಿಕ ಸುರಕ್ಷ ಸಂಹಿತೆ 2023 ಸೆಕ್ಷನ್ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.
………..




