ನವೆಂಬರ್‌ 1ರವರೆಗೂ ಕೇರಳ, ತಮಿಳುನಾಡು ಸೇರಿದಂತೆ ಕರ್ನಾಟಕದ ಹಲವೆಡೆ ಭಾರೀ ಮಳೆ ಮುನ್ಸೂಚನೆ

ಕರ್ನಾಟಕ:ಬಂಗಾಳಕೊಲ್ಲಿಯಲ್ಲಿ ಹಮೂನ್ ಚಂಡಮಾರುತ ಉಂಟಾಗಿದ್ದು, ಇದರ ಪ್ರಭಾವ ದಕ್ಷಿಣ ಭಾರತರದ ರಾಜ್ಯಗಳ ಮೇಲೆ ಬೀರಲಿದೆ. ತಮಿಳುನಾಡು, ಕೇರಳ ಸೇರಿದಂತೆ ಕರ್ನಟಕದಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ ವ್ಯಾಪಕವಾಗಿ ಮಳೆರಾಯ ಆರ್ಭಟಿಸಲಿದ್ದು, ಭೂಮಿಗೆ ತಂಪೆರೆಯಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೇರಳ, ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹಮೂನ್ ಚಂಡಮಾರುತದ ಪರಿಣಾಮದಿಂದ ರಾಜ್ಯದಲ್ಲಿ ಅಕ್ಟೋಬರ್ 29ರಿಂದ ನವೆಂಬರ್‌ 1ರವರೆಗೆ ವ್ಯಾಪಕ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ ಮಳೆ ಬೀಳುವ ಮುನ್ಸೂಚನೆ ನೀಡಿದೆ.

Latest Indian news

Popular Stories