Featured StoryUttara Kannada

ಉತ್ತರ ಕನ್ನಡ: ಭಾರಿ ಮಳೆ ಹಿನ್ನೆಲೆ ಜುಲೈ 24ರಂದು ಮೂರು ತಾಲೂಕುಗಳ ಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ‘ಆರೆಂಜ್ ಅಲರ್ಟ್’ (Orange Alert) ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಜಿಲ್ಲೆಯ ಶಿರಸಿ, ಸಿದ್ಧಾಪುರ ಮತ್ತು ಜೋಯಿಡಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ (ಜುಲೈ 24, 2026) ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.

ವಿಪತ್ತು ನಿರ್ವಹಣಾ ಕಾಯ್ದೆ 2005ರ ನಿಯಮಗಳಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಈ ಕೆಳಗಿನಂತೆ ಸ್ಪಷ್ಟಪಡಿಸಿದ್ದಾರೆ:
ರಜೆ ಅನ್ವಯವಾಗುವ ತಾಲೂಕುಗಳು: ಶಿರಸಿ, ಸಿದ್ಧಾಪುರ ಹಾಗೂ ಜೋಯಿಡಾ.

ಅನ್ವಯವಾಗುವ ಸಂಸ್ಥೆಗಳು:
ಈ ತಾಲೂಕುಗಳ ವ್ಯಾಪ್ತಿಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು.

ಸೂಚನೆ: ರಜೆಯಿಂದಾಗಿ ನಷ್ಟವಾಗುವ ಶೈಕ್ಷಣಿಕ ಸಮಯವನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ (ಅನುಕೂಲಕ್ಕೆ ತಕ್ಕಂತೆ ತರಗತಿಗಳನ್ನು ನಡೆಸಿ) ಮಾಡಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ.

Back to top button